ಚೆನ್ನೈ: ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ನಡುವಿನ ಐಪಿಎಲ್ ಪಂದ್ಯ ವಿರೋಧಿಸಿ ವಿವಿಧ ಸಂಘಟನೆಯ ಕಾರ್ಯಕರ್ತರು ಮಂಗಳವಾರ ಚೆನ್ನೈನಲ್ಲಿ ಪ್ರತಿಭಟನೆ ನಡೆಸಿದರು.
ಕಾವೇರಿನ ನಿರ್ವಹಣಾ ಮಂಡಳಿಗಾಗಿ ರಾಜ್ಯಾಂದ್ಯತ ಪ್ರತಿಭಟನೆ ನಡೆಯುತ್ತಿದ್ದು, ಇಂತಹ ಸಂದರ್ಭದಲ್ಲಿ ಐಪಿಎಲ್ ಬೇಡ ಎಂದು ಒತ್ತಾಯಿಸಿ ವಿವಿಧ ರಾಜಕೀಯ ಪಕ್ಷಗಳ ಕಾರ್ಯಕರ್ತರು ಅಣ್ಣಾ ಸಲೈ ನ ಎಂ.ಎ. ಚಿದಂಬರಂ ಕ್ರೀಡಾಂಗಣದ ಹೊರಗೆ ಪ್ರತಿಭಟನೆ ನಡೆಸಿದರು.
ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಕ್ರೀಡಾಂಗಣಕ್ಕೆ ನುಗ್ಗಲು ಯತ್ನಿಸಿದ ಎಡಿಪಿಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
ಕಾವೇರಿ ನದಿ ನೀರು ಹಂಚಿಕೆ ವಿವಾದ ಸಂಬಂಧ ತಮಿಳುನಾಡಿನಲ್ಲಿ ಪ್ರತಿಭಟನೆ ನಡೆಯುತ್ತಿರುವಾಗ ಐಪಿಎಲ್ ಪಂದ್ಯ ಆಯೋಜನೆ ಮಾಡಿರುವುದು ಮುಜುಗರದ ಸಂಗತಿಯಾಗಿದೆ ಎಂದು ಕಳೆದ ಭಾನುವಾರ ಸೂಪರ್ ಸ್ಟಾರ್ ರಜನಿಕಾಂತ್ ಅವರು ಹೇಳಿದ್ದರು. ಅಲ್ಲದೆ ಕನಿಷ್ಠ ಚನ್ನೈ ಸೂಪರ್ ಕಿಂಗ್ಸ್ ತಂಡವಾದರೂ ಕಪ್ಪು ಪಟ್ಟಿ ಧರಿಸುವ ಮೂಲಕ ಕಾವೇರಿ ಬಗ್ಗೆ ಒಗಟ್ಟು ಪ್ರದರ್ಶಿಸುವಂತೆ ಕರೆ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics