ಅತ್ಯಾಚಾರ 
ದೇಶ

2 ವರ್ಷಗಳಿಂದ ತನ್ನ ಅಪ್ರಾಪ್ತ ಮಕ್ಕಳ ಮೇಲೆ ನಿರಂತರ ಅತ್ಯಾಚಾರ; ಫ್ಯಾಷನ್ ಡಿಸೈನರ್ ಬಂಧನ

ಎರಡು ವರ್ಷಗಳಿಂದ ತನ್ನ ಇಬ್ಬರು ಅಪ್ರಾಪ್ತ ಮಕ್ಕಳ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ ಆರೋಪದ ಮೇಲೆ ನಾಲ್ಕು ಮಕ್ಕಳ ತಂದೆ 42 ವರ್ಷದ ವ್ಯಕ್ತಿಯೊರ್ವನನ್ನು ಪೊಲೀಸರು ಬಂಧಿಸಿದ್ದಾರೆ...

ಮುಂಬೈ: ಎರಡು ವರ್ಷಗಳಿಂದ ತನ್ನ ಇಬ್ಬರು ಅಪ್ರಾಪ್ತ ಮಕ್ಕಳ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ ಆರೋಪದ ಮೇಲೆ ನಾಲ್ಕು ಮಕ್ಕಳ ತಂದೆ 42 ವರ್ಷದ ವ್ಯಕ್ತಿಯೊರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ತನ್ನ 17 ವರ್ಷ ಹಾಗೂ 13 ವರ್ಷದ ಮಕ್ಕಳ ಮೇಲೆ ತಂದೆ ಕಳೆದ ಎರಡು ವರ್ಷಗಳಿಂದ ಲೈಂಗಿಕ ಕಿರುಕುಳ ನೀಡುತ್ತಾ ಬಂದಿದ್ದಾನೆ. ತಂದೆಯ ಆಟಾಟೋಪದಿಂದ ಬೇಸತ್ತ ಹಿರಿಯ ಮಗಳು ಕೊನೆಗೂ ತನ್ನ ತಾಯಿಗೆ ವಿಷಯ ಮುಟ್ಟಿಸಿದ್ದಾಳೆ. ನಂತರ ತಾಯಿ ಇಬ್ಬರು ಸಂತ್ರಸ್ತ ಬಾಲಕಿಯರು ಸೇರಿ ಪೊಲೀಸ್ ಠಾಣೆಗೆ ಹೋಗಿ ದೂರು ದಾಖಲಿಸಿದ್ದಾರೆ. 
ವಿದ್ಯಾಭ್ಯಾಸ ಹಾಗೂ ಖರ್ಚಿಗೆ ಹಣ ನೀಡುವುದನ್ನು ನಿಲ್ಲಿಸುವುದಾಗಿ ಬೆದರಿಕೆಯೊಡ್ಡಿ ತನ್ನ ಇಬ್ಬರು ಮಕ್ಕಳ ಮೇಲೆ ಕಾಮುಕ ತಂದೆ ಅತ್ಯಾಚಾರ ನಡೆಸುತ್ತಿದ್ದರು. ಸಂತ್ರಸ್ತ ಬಾಲಕಿ ತನ್ನ ದೂರಿನಲ್ಲಿ ನನ್ನ ತಂದೆ ಕಳೆದ ಎರಡು ವರ್ಷಗಳಿಂದ ಅತ್ಯಾಚಾರ ನಡೆಸುತ್ತಿದ್ದಾರೆ. ನನಗೆ ನಿಗದಿತ ಸಮಯ ತಿಳಿದಿಲ್ಲ. ನಾನು ಓದಿಕೊಳ್ಳುವುದಕ್ಕಾಗಿ ಮಹಡಿ ಮನೆಗೆ ಹೋಗುತ್ತಿದ್ದೆ ಆಗ ಒಂದು ದಿನ ಬಂದು ನನ್ನ ಮೇಲೆ ಬಲತ್ಕಾರ ಮಾಡಿದರು. ಈ ವಿಷಯ ಯಾರಿಗಾದರೂ ಹೇಳಿದರೆ ನಿಮ್ಮ ಪುಟ್ಟ ತಮ್ಮನನ್ನು ಸಾಯಿಸಿ ಬಿಡುತ್ತೇನೆ ಎಂದು ಎದರಿಸಿದ್ದರು. ಇಂತರ ಘಟನೆಗಳು ಹಲವು ತಿಂಗಳುಗಳು ನಡೆದವು. 
ಕೆಲ ತಿಂಗಳುಗಳ ನಂತರ ನಾನು ನನ್ನ ಹಿರಿಯ ತಂಗಿ ಮಹಡಿ ಮನೆಯಲ್ಲಿ ಟಿವಿ ನೋಡುತ್ತಿದ್ದಾಗ ಅಲ್ಲಿಗೆ ಬಂದ ನನ್ನ ತಂದೆ ನನ್ನ ಹಾಗೂ ನನ್ನ ಹಿರಿಯ ತಂಗಿಯ ಮೇಲೆ ಅತ್ಯಾಚಾರ ನಡೆಸಿದರು ಎಂದು ದೂರಲಾಗಿದ್ದು ಈ ದೂರಿನನ್ವಯ ಪೊಲೀಸರು ಪೋಕ್ಸೋ ಅಡಿಯಲ್ಲಿ ದೂರು ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್