ನರೇಂದ್ರ ಮೋದಿ-ಅಸಾದುದ್ದೀನ್ ಒವೈಸಿ 
ದೇಶ

ರೈತರ ಆತ್ಮಹತ್ಯೆ ಕುರಿತಂತೆ ಪ್ರಧಾನಿ ಮೋದಿ ಉಪವಾಸ ಸತ್ಯಾಗ್ರಹ ಮಾಡಲ್ಲ ಯಾಕೆ?: ಒವೈಸಿ

ಸಂಸತ್‌ ಕಲಾಪಗಳು ವ್ಯರ್ಥವಾದ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ಉಪವಾಸ ಸತ್ಯಾಗ್ರಹ ಮಾಡುತ್ತಾರೆ...

ಹೈದರಾಬಾದ್: ಸಂಸತ್‌ ಕಲಾಪಗಳು ವ್ಯರ್ಥವಾದ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ಉಪವಾಸ ಸತ್ಯಾಗ್ರಹ ಮಾಡುತ್ತಾರೆ. ಅದೇ ರೈತರ ಆತ್ಮಹತ್ಯೆ ಕುರಿತಂತೆ ಯಾಕೆ ಉಪವಾಸ ಮಾಡುವುದಿಲ್ಲ ಎಂದು ಅಲ್ ಇಂಡಿಯಾ ಮಜ್ಲಿಸ್ ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಅಧ್ಯಕ್ಷ ಅಸಾದುದ್ದೀನ್ ಒವೈಸಿ ಪ್ರಶ್ನಿಸಿದ್ದಾರೆ. 
ಬಜೆಟ್ ಅಧಿವೇಶನ ಬಲಿಯಾಗಲು ಕಾಂಗ್ರೆಸ್ ಕಾರಣ ಎಂದು ಆಡಳಿತರೂಢ ಬಿಜೆಪಿ ಆರೋಪಿಸಿದ್ದು, ಪ್ರತಿಪಕ್ಷಗಳ ನಡೆಯನ್ನು ಖಂಡಿಸಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್​ ಶಾ ಅವರು ಹಾಗೂ ಬಿಜೆಪಿ ಸಂಸದರೊಂದಿಗೆ ಏಪ್ರಿಲ್​ 12ರಂದು ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದಾರೆ. ಅದೇ ತಮ್ಮ ಸುಳ್ಳು ಭರವಸೆ ಮೂಲಕ ಕಳೆದ ನಾಲ್ಕು ವರ್ಷಗಳಲ್ಲಿ ಸಾವಿರಾರು ರೈತರ ಆತ್ಮಹತ್ಯೆಗೆ ಶರಣಾಗಿದ್ದಾರೆ ಅವರಿಗಾಗಿ ಮೋದಿ ಅವರು ಉಪವಾಸ ಸತ್ಯಾಗ್ರಹ ಮಾಡುವುದಿಲ್ಲ ಎಂದು ಓವೈಸಿ ಹೇಳಿದ್ದಾರೆ. 
ರೈತರಿಗಾಗಿ ಉಪವಾಸ ಸತ್ಯಾಗ್ರಹ ಮಾಡದ ಪ್ರಧಾನಿ ಮೋದಿ? ಅವರು ಉತ್ತರಪ್ರದೇಶದ ದಲಿತರ ವಿರುದ್ಧದ ದೌರ್ಜನ್ಯದ ವಿರುದ್ಧ ಸತ್ಯಾಗ್ರಹ ಮಾಡುತ್ತಾರಾ? ಎಂದು ಹೈದರಾಬಾದ್ ಲೋಕಸಭಾ ಸಂಸದ ಅಸಾದುದ್ದೀನ್ ಒವೈಸಿ ಪ್ರಶ್ನಿಸಿದ್ದಾರೆ. 
ಪತ್ರಕರ್ತರೊಂದಿಗೆ ಮಾತನಾಡಿದ ಒವೈಸಿ, ಜಮ್ಮು ಮತ್ತು ಕಾಶ್ಮೀರದಲ್ಲಿ ಎಂಟು ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆಗೆ ಸಂಬಂಧ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ನಿಲುವನ್ನು ತಿಳಿಯಲು ಬಯಸುತ್ತೇನೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT