ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ 
ದೇಶ

ದಲಿತರ ಮೇಲಿನ ದೌರ್ಜನ್ಯ ಹೆಚ್ಚಾಗಿದೆ; ಮಾಜಿ ಪ್ರಧಾನಿ ಮನಮೋಹನ್ ಸಿಂಗ್

ಅಲ್ಪಸಂಖ್ಯಾತರು ಹಾಗೂ ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚಾಗಿದ್ದು, ಇಂತಹ ಪ್ರಕರಣಗಳನ್ನು ಗಮನಿಸಿದೇ ಹೋದರೆ, ದೇಶದ ಪ್ರಜಾಪ್ರಭುತ್ನದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದು ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್...

ಚಂಡೀಗಢ: ಅಲ್ಪಸಂಖ್ಯಾತರು ಹಾಗೂ ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚಾಗಿದ್ದು, ಇಂತಹ ಪ್ರಕರಣಗಳನ್ನು ಗಮನಿಸಿದೇ ಹೋದರೆ, ದೇಶದ ಪ್ರಜಾಪ್ರಭುತ್ನದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದು ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಬುಧವಾರ ಹೇಳಿದ್ದಾರೆ. 
ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ವಿಭಜನಾ ನೀತಿಗಳು ಮತ್ತು ರಾಜಕೀಯ ಅತ್ಯಂತ ಅಪಾಯಕಾರಿಯಾದದ್ದು. ಪ್ರಜಾಪ್ರಭುತ್ವ ಒಂದು ವ್ಯವಸ್ಥೆಯಾಗಿದ್ದು, ಸವಲತ್ತುಗಳಿಲ್ಲದ ಜನರು ಆಡಳಿತದಲ್ಲಿ ನಿರ್ಣಾಯಕ ಧ್ವನಿಯನ್ನು ಹೊಂದಿರುತ್ತಾರೆ. ಇದನ್ನು ಕಳೆದುಕೊಂಡಿದ್ದೇ ಆದರೆ, ಪ್ರಜಾಪ್ರಭುತ್ವಕ್ಕೆ ಅರ್ಥವೇ ಇಲ್ಲದಂತಾಗುತ್ತದೆ ಎಂದು ಹೇಳಿದ್ದಾರೆ. 
ದೇಶದ ಸ್ವಾತಂತ್ರ್ಯವು ಕೇವಲ ಸರ್ಕಾರದ ಸ್ವಾತಂತ್ರ್ಯವಾಗಿರಬಾರದು. ಇದು ಜನರ ಸ್ವಾತಂತ್ರ್ಯವಾಗಿರಬೇಕು. ಪ್ರತೀಯೊಬ್ಬ ಭಾರತೀಯನ ಸ್ವಾತಂತ್ರ್ಯವಾಗಿರಬೇಕು. ಒಬ್ಬ ವ್ಯಕ್ತಿ ಅಥವಾ ಗುಂಪಿನ ಸ್ವಾತಂತ್ರ್ಯವು ಇತರೆ ವ್ಯಕ್ತಿಗಳ ಅಥವಾ ಗುಂಪುಗಳ ಸ್ವಾತಂತ್ರ್ಯವನ್ನು ನಿರ್ಬಂಧಿಸಲು ಬಳಕೆ ಮಾಡಬಾರದು. ಜನರು ನಿರಂಕುಶ ಪರ್ಯಾಯಗಳಾಗಿ ಬದಲಾಗುತ್ತಿದ್ದು. ತಮ್ಮನ್ನು ತಾವು ಪ್ರಶ್ನೆ ಮಾಡಿಕೊಳ್ಳುವ ಅಗತ್ಯವಿದೆ. ದೀರ್ಘಾವಧಿಯಲ್ಲಿ ದೇಶವನ್ನು ನಾಶಮಾಡುವಿಕೆ ಕೂಡ ಅಂತ್ಯಗೊಳ್ಳಲಿದೆ ಎಂದು ತಿಳಿಸಿದ್ದಾರೆ. 
ದೇಶದ ಜನತೆಯನ್ನು ಧರ್ಮ, ಜಾರಿ, ಭಾಷೆ ಹಾಗೂ ಸಂಸ್ಕೃತಿಯ ಆಧಾರ ಮೇಲೆ ಒಡೆಯುವ ಪ್ರಯತ್ನಗಳು ನಡೆಯುತ್ತಿವೆ. ಅಲ್ಪಸಂಖ್ಯಾತರು ಹಾಗೂ ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಇದರ ಬಗ್ಗೆ ಸರ್ಕಾರ ಗಮನಿಸಿದೇ ಹಾಗೂ ನಿರ್ಲಕ್ಷ್ಯ ಮಾಡಿದರೆ, ಅದು ದೇಶದ ಮೇಲೆ ಗಂಭೀರ ಪರಿಣಾಮವನ್ನು ಬೀರುತ್ತದೆ ಎಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT