ಡಿಫೆನ್ಸ್ ಎಕ್ಸ್'ಪೋ-2018: ಚೆನ್ನೈಗೆ ತೆರಳಿದ ಪ್ರಧಾನಿ ಮೋದಿ 
ದೇಶ

ಡಿಫೆನ್ಸ್ ಎಕ್ಸ್'ಪೋ-2018: ಚೆನ್ನೈನಲ್ಲಿ ಪ್ರಧಾನಿ ಮೋದಿ, ಪ್ರತಿಭಟನಾ ನಿರತರಿಂದ ಕಪ್ಪು ಬಾವುಟ ಪ್ರದರ್ಶನ

ರಕ್ಷಣಾ ಇಲಾಖೆಯ ಡಿಫೆನ್ಸ್ ಎಕ್ಸ್'ಪೋ-2018 ಪ್ರದರ್ಶನವನ್ನು ಉದ್ಘಾಟಿಸುವ ಸಲುವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಚೈನ್ನೈಗೆ ತೆರಳಿದ್ದು, ಈ ವೇಳೆ ಕೆಲ ಪ್ರತಿಭಟನಾಕಾರರು...

ಚೆನ್ನೈ; ರಕ್ಷಣಾ ಇಲಾಖೆಯ ಡಿಫೆನ್ಸ್ ಎಕ್ಸ್'ಪೋ-2018 ಪ್ರದರ್ಶನವನ್ನು ಉದ್ಘಾಟಿಸುವ ಸಲುವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಚೈನ್ನೈಗೆ ತೆರಳಿದ್ದು, ಈ ವೇಳೆ ಕೆಲ ಪ್ರತಿಭಟನಾಕಾರರು ಮೋದಿಯವರಿಗೆ ಕಪ್ಪು ಬಾವುಟ ಪ್ರದರ್ಶಿಸಿದ್ದಾರೆಂದು ತಿಳಿದುಬಂದಿದೆ. 
ಚೆನ್ನೈನ ವಿಮಾನ ನಿಲ್ದಾಣಕ್ಕೆ ಮೋದಿಯವರು ಆಗಮಿಸುತ್ತಿದ್ದಂತೆಯೇ ಪ್ರಯಾಣಿಕರ ಸೋಗಿನಲ್ಲಿದ್ದ ಕೆಲ ಪ್ರತಿಭಟನಾಕಾರರು ಕಪ್ಪು ಬಾವುಟವನ್ನು ಪ್ರದರ್ಶಿಸಿದ್ದಾರೆ. ಅಲ್ಲದೆ, ಮೋದಿ ವಿರುದ್ಧ ಗೋ ಬ್ಯಾಕ್ ಮೋದಿ ಎಂದು ಘೋಷಣಾ ವಾಕ್ಯಗಳನ್ನು ಕೂಗಿದ್ದಾರೆಂದು ತಿಳಿದುಬಂದಿದೆ. 
ಇಂದು ಬೆಳಿಗ್ಗೆ 9.30ರ ಸುಮಾರಿಗೆ ಚೆನ್ನೈ ವಿಮಾನ ನಿಲ್ದಾಣಕ್ಕೆ ತಲುಪಿದ ಮೋದಿಯವರು ಡಿಫೆನ್ಸ್ ಎಕ್ಸ್'ಪೋ-2018 ಕಾರ್ಯಕ್ರಮ ಉದ್ಘಾಟನಾ ಸ್ಥಳಕ್ಕೆ ತೆರಳಲು ರಸ್ತೆ ಮಾರ್ಗವನ್ನು ಬಳಸದೆಯೇ ಹೆಲಿಕಾಪ್ಟರ್ ಮೂಲತ ತೆರಳಿದರು. 
ಚೆನ್ನೈ ವಿಮಾನ ನಿಲ್ದಾಣದಲ್ಲಿ ವಾಹನ ದಟ್ಟಣೆ ಹೆಚ್ಚಾಗಿದ್ದರಿಂದಾಗಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮ್ ಅವರು ಕೆಲ ದೂರ ನಡೆದುಹೋಗಿ ಪ್ರಧಾನಿ ಮೋದಿಯವರನ್ನು ಸ್ವಾಗತಿಸಿದರು. ಈ ವೇಳೆ ನೂರಾರು ಪ್ರತಿಭಟನಾಕಾರರು ಕಪ್ಪು ಬಾವುಟನ್ನು ಪ್ರದರ್ಶಿಸಿದ್ದಾರೆ. ಮೋದಿಯವರಿಗೆ ಕಪ್ಪು ಬಾವುಟ ಪ್ರದರ್ಶಿಸಿದ್ದ ಚಿತ್ರ ನಿರ್ದೇಶಕ ಭರತಿರಾಜ, ವೆಟ್ರಿಮರನ್, ಗೌತಮ್ ಮತ್ತು ಅಮಿರ್ ಸೇರಿದಂತೆ ಇನ್ನತರೆ ಪ್ರತಿಭಟನಾಕಾರರನ್ನು ಕೂಡಲೇ ಪೊಲೀಸರು ಬಂಧನಕ್ಕೊಳಪಡಿಸಿದರು. 
ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಆದೇಶದಂತೆ ಮಾ.29ರಂದು ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡದೇ ಮತ್ತಷ್ಟು ಕಾಲಾವಕಾಶವನ್ನು ಕೇಳಿದ್ದನ್ನು ಖಂಡಿಸಿ ತಮಿಳುನಾಡು ಜನತೆ ತೀವ್ರವಾಗಿ ಪ್ರತಿಭಟನೆ ನಡೆಸುತ್ತಿದೆ. ಪ್ರತಿಭಟನೆ ತೀವ್ರಗೊಂಡಿರುವ ಹಿನ್ನಲೆಯಲ್ಲಿ ಈಗಾಗಲೇ ಚೆನ್ನೈನಲ್ಲಿ ನಡೆಯಬೇಕಿದ್ದ ಎಲ್ಲಾ ಐಪಿಎಲ್ ಪಂದ್ಯಗಳನ್ನೂ ಬೇರೆ ರಾಜ್ಯಗಳಿಗೆ ಸ್ಥಳಾಂತರ ಮಾಡಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT