ತಕ್ಷಣವೇ ಕಾವೇರಿ ನಿರ್ವಹಣಾ ಮಂಡಳಿ ರಚಿಸಿ: ಪ್ರಧಾನಿಗೆ ತಮಿಳುನಾಡು ಒತ್ತಾಯ
ಜೂನ್ 1ರಿಂದ ಮುಂದಿನ ನೀರಾವರಿ ಋತು ಆರಂಭವಾಗುವ ಮುನ್ನ ಕಾವೇರಿ ನಿರ್ವಹಣಾ ಮಂಡಳಿ ರಚಿಸುವಂತೆ....
ಚೆನ್ನೈ: ಜೂನ್ 1ರಿಂದ ಮುಂದಿನ ನೀರಾವರಿ ಋತು ಆರಂಭವಾಗುವ ಮುನ್ನ ಕಾವೇರಿ ನಿರ್ವಹಣಾ ಮಂಡಳಿ ರಚಿಸುವಂತೆ ತಮಿಳುನಾಡು ಸರ್ಕಾರ ಗುರುವಾರ ಕೇಂದ್ರ ಸರ್ಕಾರಕ್ಕೆ ಒತ್ತಾಯಾಸಿದೆ.
ಈ ಸಂಬಂಧ ತಮಿಳುನಾಡು ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಅವರು, ಇಂದು ಚೆನ್ನೈಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದರು.
ಫೆಬ್ರವರಿ 16ರಂದು ಸುಪ್ರೀಂ ಕೋರ್ಟ್ ನೀಡಿದ ಆದೇಶದಂತೆ ಕೇಂದ್ರ ಸರ್ಕಾರ ಈ ಕೂಡಲೇ ಕಾವೇರಿ ನಿರ್ವಹಣಾ ಮಂಡಳಿ ರಚಿಸಬೇಕು. ರಾಜ್ಯದ ರೈತರು ಕೃಷಿಗಾಗಿ ಕಾವೇರಿ ನೀರಿನ ಮೇಲೆ ಅವಲಂಬಿತರಾಗಿದ್ದಾರೆ ಎಂದು ಪಳನಿಸ್ವಾಮಿ ಹೇಳಿದ್ದಾರೆ.
ಕಾವೇರಿ ಪರ ಹೋರಾಟ ನಡೆಸುತ್ತಿರುವ ತಮಿಳುಪರ ಸಂಘಟನೆಗಳು ರಕ್ಷಣಾ ಪ್ರದರ್ಶನ ಉದ್ಘಾಟನೆಗೆ ಆಗಮಿಸಿದ್ದ ಪ್ರಧಾನಿ ಮೋದಿ ಅವರಿಗೆ ಕಪ್ಪು ಬಾವುಟ್ ತೋರಿಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.