ಕುಲದೀಪ್ ಸಿಂಗ್ ಸೆಂಗರ್ 
ದೇಶ

ಉನ್ನಾವೊ ಅತ್ಯಾಚಾರ ಪ್ರಕರಣ: ಶಾಸಕ ಕುಲದೀಪ್ ಸಿಂಗ್ ಸೆಂಗರ್ ಸಿಬಿಐ ವಶಕ್ಕೆ

ಉನ್ನಾವೊ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ನನ್ನು ಸಿಬಿಐ ಅಧಿಕಾರಿಗಳು ಶುಕ್ರವಾರ ಬಂಧಿಸಿದ್ದಾರೆ. ...

ಉನ್ನಾವೊ: ಉನ್ನಾವೊ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ನನ್ನು ಸಿಬಿಐ ಅಧಿಕಾರಿಗಳು ಶುಕ್ರವಾರ ಬಂಧಿಸಿದ್ದಾರೆ. 
ಶಾಸಕ ಕುಲದೀಪ್ ಸಿಂಗ್ ವಿರುದ್ಧ, ಭಾರತೀಯ ದಂಡ ಸಿಂಹಿತೆ 363, 366 376 ಹಾಗೂ 506 ಅಡಿ ಗುರುವಾರ ಎಫ್ ಐ ಆರ್ ದಾಖಲಾಗಿದ್ದು, ಪ್ರಕರಣವನ್ನು ಸಿಬಿಐ ಗೆ ವಹಿಸಲಾಗಿತ್ತು.
ಕಳೆದ ವರ್ಷದ ಜೂನ್ ತಿಂಗಳಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಶಾಸಕರಿಂದ ಅತ್ಯಾಚಾರ ನಡೆದಿತ್ತು, ಶಾಸಕರ ಜೊತೆಗೆ ಅವರ ಸಹೋದರ ಕೂಡ ತಮ್ಮ ಮಗಳ ಮೇಲೆ ಅತ್ಯಾಚಾರ ನಡೆಸಿದ್ದ ಎಂದು ಸಂತ್ರಸ್ತೆಯ ಪೋಷಕರು ಆರೋಪಿಸಿದ್ದರು. 
ದೂರು ವಾಪಸ್ ತೆಗೆದುಕೊಳ್ಳುವಂತೆ ಆಗ್ರಹಿಸಿ ಏಪ್ರಿಲ್ 3 ರಂದು ಶಾಸಕರ ಸಹೋದರ ಅತುಲ್ ಸಿಂಗ್ ಸೆಹರ್ ಸಂತ್ರಸ್ತೆಯ ತಂದೆ ಮೇಲೆ ಹಲ್ಲೆ ನಡೆಸಿದ್ದ, ಈ ಪ್ರಕರಣ ಸಂಬಂಧ ಆರು ಮಂದಿ ಉತ್ತರ ಪ್ರದೇಶ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಏಪ್ರಿಲ್ 8 ರಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಮನೆ ಮುಂದೆ ಸಂತ್ರಸ್ತೆ ಮತ್ತವಳ ಕುಟುಂಬ ಸದಸ್ಯರು ಆತ್ಮಹತ್ಯೆಗೆ ಯತ್ನಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT