ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿನ ನಿರ್ಮಾಣವಾಗಬೇಕೆಂದು ಪ್ರತಿಪಾದಿಸಿದ್ದ ಶಿಯಾ ವಕ್ಫ್ ಮಂಡಳಿಯ ಮುಖ್ಯಸ್ಥ ವಾಸೀಮ್ ರಿಜ್ವಿ ಅವರನ್ನು ಹತ್ಯೆ ಮಾಡಲು ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಂಚು ರೂಪಿಸಿದ್ದ ಎಂಬ ಸಂಗತಿ ಇದೀಗ ಬೆಳಕಿಗೆ ಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ದಾವೂದ್ ಬಂಟರೆಂದು ಹೇಳಲಾದ ಮೂವರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಈ ಸಂಚಿನ ಮೂಲಕ ಮುಂದಿನ ಲೋಕಸಭೆ ಚುನಾವಣೆಯಲ್ಲಿ ದೇಶದಲ್ಲಿ ಕೋಮು ಗಲಭೆ ಸೃಷ್ಟಿಸುವ ಹುನ್ನಾರ ಕೂಡ ನಡೆದಿದ್ದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಜನವರಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದ ಮೌಲ್ವಿ ರಿಜ್ವಿಯವರು, ಮದರಸಾಗಳು ಉಗ್ರರನ್ನು ಬೆಳೆಸುವ ಕೇಂದ್ರಗಳಾಗಿದ್ದು, ಅವುಗಳನ್ನು ಸ್ಥಗಿತಗೊಳಿಸಬೇಕು ಎಂದು ಹೇಳಿದ್ದರು. ಅಲ್ಲದೆ. ಅಯೋಧ್ಯೆಯಲ್ಲಿ ರಾಮ ಮಂದಿನ ಆಗುವುದನ್ನು ವಿರೋಧಿಸುವವರು ಪಾಕಿಸ್ತಾನಕ್ಕೆ ತೆರಳಬೇಕೆಂದು ತಿಳಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics