ಮತ್ತೊಬ್ಬ ಜೆಎನ್ ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಕೇಸ್ ದಾಖಲು
ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯ(ಜೆಎನ್ ಯು)ದ....
ನವದೆಹಲಿ: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯ(ಜೆಎನ್ ಯು)ದ ಮತ್ತೊಬ್ಬ ಪ್ರೊಫೆಸರ್ ವಿರುದ್ಧ ದೆಹಲಿ ಪೊಲೀಸರು ಶುಕ್ರವಾರ ಕೇಸ್ ದಾಖಲಿಸಿದ್ದಾರೆ.
ವಿವಿಯ ಸಮಾಜ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಅಜಯ್ ಕುಮಾರ್ ಅವರ ವಿರುದ್ಧ ದೆಹಲಿ ಪೊಲೀಸರು ನಿನ್ನೆ ಎಫ್ಐಆರ್ ದಾಖಲಿಸಿದ್ದಾರೆ.
ಎರಡು ದಿನಗಳ ಹಿಂದೆ ಪ್ರಾಧ್ಯಾಪಕ ಅಜಯ್ ಕುಮಾರ್ ಅವರು ನನ್ನೊಂದಿಗೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿನಿಯೊಬ್ಬರು ವಸಂತ್ ಕುಂಜ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಜೆಎನ್ ಯು ಪ್ರಾಧ್ಯಾಪಕರ ವಿರುದ್ಧ ಐಪಿಸಿ ಸೆಕ್ಷನ್ 354ರಡಿ ಕೇಸ್ ದಾಖಲಿಸಿದ್ದು, ತನಿಖೆ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಐಎಎನ್ ಎಸ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಈ ಮಧ್ಯೆ, ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ ಯಾವುದೇ ವಿದ್ಯಾರ್ಥಿ ತನಗೆ ದೂರು ನೀಡಿಲ್ಲ ಎಂದು ವಿವಿ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.
ಕಳೆದ ಒಂದು ತಿಂಗಳಲ್ಲಿ ವಿವಿಧ ಪ್ರಾಧ್ಯಾಪಕರ ವಿರುದ್ಧ ದಾಖಲಾಗಿರುವ ಮೂರನೇ ಲೈಂಗಿಕ ಕಿರುಕುಳ ಪ್ರಕರಣ ಇದಾಗಿದ್ದು, ಎರಡು ವಿಭಿನ್ನ ಪ್ರಕರಣಗಳಲ್ಲಿ ನಾಲ್ವರು ಪ್ರೊಫೆಸರ್ ವಿರುದ್ಧ ಕೇಸ್ ದಾಖಲಿಸಲಾಗಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.