ಅಂಬೇಡ್ಕರ್ ಪ್ರತಿಮೆ 
ದೇಶ

ಬಿಜೆಪಿ ನಾಯಕರು ಪುಷ್ಪ ನಮನ ಸಲ್ಲಿಸಿದ ಬಳಿಕ ಅಂಬೇಡ್ಕರ್ ಪ್ರತಿಮೆ ಸ್ವಚ್ಛಗೊಳಿಸಿದ ದಲಿತರು

ಕೇಂದ್ರ ಸಚಿವೆ ಮನೆಕಾ ಗಾಂಧಿ ಮತ್ತು ಇತರೆ ಬಿಜೆಪಿ ನಾಯಕರು ವಡೊದರಲ್ಲಿರುವ ಡಾ.ಬಿಆರ್ ಅಂಬೇಡ್ಕರ್....

ವಡೊದರ: ಕೇಂದ್ರ ಸಚಿವೆ ಮನೆಕಾ ಗಾಂಧಿ ಮತ್ತು ಇತರೆ ಬಿಜೆಪಿ ನಾಯಕರು ವಡೊದರಲ್ಲಿರುವ ಡಾ.ಬಿಆರ್ ಅಂಬೇಡ್ಕರ್ ಅವರ 127ನೇ ಜಯಂತಿ ಪ್ರಯುಕ್ತ ಸಂವಿಧಾನ ಶಿಲ್ಪಿಗೆ ಪುಷ್ಪ ನಮನ ಸಲ್ಲಿಸಿದ ಬಳಿಕ ದಲಿತ ಸಮುದಾಯದ ಸದಸ್ಯರು ಪ್ರತಿಮೆ ಸ್ವಚ್ಛಗೊಳಿಸಿದ ಘಟನೆ ಶನಿವಾರ ನಡೆದಿದೆ.
ಬಿಜೆಪಿ ನಾಯಕರು ಬರುವ ಮುನ್ನವೇ ಪ್ರತಿಮೆ ಬಳಿ ಉಪಸ್ಥಿತರಿದ್ದು ಗೌರವ ಸಲ್ಲಿಸಿದ ಬರೋಡಾ ಮಹಾರಾಜ ಸಯಾಜಿರಾವ್ ವಿಶ್ವವಿದ್ಯಾಲಯ ಎಸ್ಸಿ, ಎಸ್ಟಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಥಾಕೋರ್ ಸೊಲಂಕಿ ಅವರು, ಬಿಜೆಪಿ ನಾಯಕರಿಂದ ಇಲ್ಲಿನ ಪರಿಸರ ಮಲಿನವಾಗಿದೆ ಎಂದು ದಲಿತ ನಾಯಕರೊಬ್ಬರು ಆರೋಪಿಸಿದ್ದಾರೆ.
ಸೊಲಂಕಿ ನೇತೃತ್ವದಲ್ಲಿ ದಲಿತ ಸಮುದಾಯದ ಸದಸ್ಯರು, ಕೇಂದ್ರ ಸಚಿವೆ ಹಾಗೂ ಅವರೊಂದಿಗೆ ಆಗಮಿಸಿದ್ದ ಬಿಜೆಪಿ ನಾಯಕರ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಇಬ್ಬರ ನಡುವೆ ಕೆಲಕಾಲ ವಾಗ್ವಾದ ಸಹ ನಡೆಯಿತು. ಆದರೆ ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.
ಬಿಜೆಪಿ ನಾಯಕರು ಅಂಬೇಡ್ಕರ್ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಸ್ಥಳದಿಂದ ತೆರಳಿದ ಬಳಿಕ ದಲಿತ ಸಮುದಾಯದ ಸದಸ್ಯರು, ಪ್ರತಿಮೆಯನ್ನು ಹಾಲು ಮತ್ತು ನೀರಿನಿಂದ ಸ್ವಚ್ಛಗೊಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!