ನವದೆಹಲಿ: ಕಥುವಾ ಅತ್ಯಾಚಾರ ಪ್ರಕರಣದಲ್ಲಿ ನಡೆದಿರುವ ಪ್ರತಿಭಟನೆಗೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಕಾಂಗ್ರೆಸ್ ನ್ನು ದೂಷಿಸಿದ್ದಾರೆ.
8 ವರ್ಷದ ಬಾಲಕಿಯ ಮೇಲೆ ನಡೆದಿರುವ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ. ತ್ವರಿತ ಕ್ರಮ ಕೈಗೊಳ್ಳದೇ ಇರುವುದಕ್ಕೆ ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ. ಈ ಬಗ್ಗೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಕಾಂಗ್ರೆಸ್ ಕಾರಣ ಎಂದು ಆರೋಪಿಸಿದ್ದಾರೆ. ಅಷ್ಟೇ ಅಲ್ಲದೇ ಬಿಜೆಪಿ-ಪಿಡಿಪಿ ಮೈತ್ರಿ ಸುಭದ್ರವಾಗಿದೆ ಎಂದೂ ಹೇಳಿದ್ದಾರೆ.