ಅಪ್ರಾಪ್ತರ ಮೇಲೆ ಅತ್ಯಾಚಾರ ಮಾಡಿದ ಅಪರಾಧಿಗಳಿಗೆ ಗಲ್ಲು ಶಿಕ್ಷೆಗೆ ಪ್ರಸ್ತಾವನೆ: ಮನೇಕಾ ಗಾಂಧಿ
ಈಗಿರುವ ಪೋಸ್ಕೋ ಕಾಯ್ದೆಗೆ ತಿದ್ದುಪಡಿ ತಂದು 12 ವರ್ಷಗಳೊಳಗಿನ ಅಪ್ರಾಪ್ತರ ಮೇಲೆ ಅತ್ಯಾಚಾರವೆಸಗಿದವರಿಗೆ ಗಲ್ಲು ಶಿಕ್ಷೆ ಜಾರಿಯಾಗುವಂತಹ ಪ್ರಸ್ತಾವನೆಯನ್ನು ಮಹಿಳಾ ಮತ್ತು ಮಕ್ಕಳ
ವಡೋದರ: ಈಗಿರುವ ಪೋಸ್ಕೋ ಕಾಯ್ದೆಗೆ ತಿದ್ದುಪಡಿ ತಂದು 12 ವರ್ಷಗಳೊಳಗಿನ ಅಪ್ರಾಪ್ತರ ಮೇಲೆ ಅತ್ಯಾಚಾರವೆಸಗಿದವರಿಗೆ ಗಲ್ಲು ಶಿಕ್ಷೆ ಜಾರಿಯಾಗುವಂತಹ ಪ್ರಸ್ತಾವನೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಮನೇಕಾ ಗಾಂಧಿ ಹೇಳಿದ್ದಾರೆ.
ನನ್ನ ಇಲಾಖೆ ಪೋಸ್ಕೋ ಕಾಯ್ದೆಯ ಬದಲಾವಣೆಗೆ ಪ್ರಸ್ತಾವನೆ ಸಲ್ಲಿಸಲಿದ್ದು 12 ವರ್ಷದೊಳಗಿನ ಅಪ್ರಾಪ್ತರ ಮೇಲೆ ಅತ್ಯಾಚಾರ ನಡೆಸಿದರಿಗೆ ಗಲ್ಲು ಶಿಕ್ಷೆ ವಿಧಿಸಲು ಶಿಫಾರಸ್ಸು ಮಾಡುತ್ತದೆ ಎಂದು ಮನೇಕಾ ಗಾಂಧಿ ತಿಳಿಸಿದ್ದಾರೆ. ಇದರಿಂದಾಗಿ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಿದಂತಾಗುತ್ತದೆ ಎಂದು ಮನೇಕಾ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ.
ಕಥುವಾದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆದು ಹತ್ಯೆಯಾಗಿರುವ ಪ್ರಕರಣ ದೇಶಾದ್ಯಂತ ಚರ್ಚೆಯಾಗುತ್ತಿದೆ. ಈ ಬೆನ್ನಲ್ಲೇ ಮನೇಕಾ ಗಾಂಧಿ ಪೋಸ್ಕೋ ಕಾಯ್ದೆಗೆ ತಿದ್ದುಪಡಿ ತರುವುದರ ಬಗ್ಗೆ ಹೇಳಿಕೆ ನೀಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.