ಲಖನೌ: ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ 127 ನೇ ಜಯಂತಿಯ ಪ್ರಯುಕ್ತ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಮಹಾಸಭಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ "ದಲಿತ ಮಿತ್ರ'' ಬಿರುದು ನೀಡಿ ಸಮ್ಮಾನಿಸಿತು.
ಅಂಬೇಡ್ಕರ್ ಮಹಾಸಭಾ ಆಯೋಜಿಸಿದ್ದ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಯೋಗಿ ಆದಿತ್ಯನಾಥ್, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ದಲಿತರ ವಿಮೋಚನೆ ಮತ್ತು ಅಭಿವೃದ್ಧಿಗೆ ಅವಿರತವಾಗಿ ಶ್ರಮಿಸುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಸರ್ಕಾರ ಈಗಾಗಲೇ 40 ಲಕ್ಷ ಶೌಚಾಲಯಗಳನ್ನು ನಿರ್ಮಿಸಿದೆ ಎಂದರು.
ಅಂಬೇಡ್ಕರ್ ಅವರು ದಲಿತರ ಉನ್ನತಿಗಾಗಿ ಸಾಕಷ್ಟು ಶ್ರಮಿಸಿದ್ದಾರೆ. ಸಮಾಜದಲ್ಲಿ ದಲಿತರ ವಿರುದ್ದದ ತಾರತಮ್ಯವನ್ನು ಹೋಗಲಾಡಿಸಿ ಸಮಾನತೆಯನ್ನು ಸ್ಥಾಪಿಸುವ ಸಲುವಾಗಿ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಹಲವಾರು ಅವಕಾಶಗಳನ್ನು ಒದಗಿಸಿದ್ದಾರೆ. ದಲಿತರು ಮತ್ತು ತುಳಿತಕ್ಕೆ ಒಳಗಾದ ವರ್ಗದವರ ಹಕ್ಕುಗಳಿಗಾಗಿ ಅಂಬೇಡ್ಕರ್ ತಮ್ಮ ಜೀವನದ ಉದ್ದಕ್ಕೂ ಹೋರಾಡಿದರು ಎಂದರು.
ಇದೇ ವೇಳೆ ಎಸ್ಸಿ/ಎಸ್ಟಿ ಪ್ರಕರಣಗಳ ವಿಚಾರಣೆಗಾಗಿ 25 ವಿಶೇಷ ತ್ವರಿತ ಕೋರ್ಟ್ ಸ್ಥಾಪಿಸುವುದಾಗಿ ಘೋಷಿಸಿದರು. ಅಲ್ಲದೆ ದಲಿತ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ವಿದ್ಯಾರ್ಥಿ ವೇತನವನ್ನೂ 2250 ರುಪಾಯಿಯಿಂದ 3 ಸಾವಿರ ರುಪಾಯಿಗೆ ಸರ್ಕಾರ ಹೆಚ್ಚಿಸಿದೆ ಎಂದರು.
ಸಮಾರಂಭದಲ್ಲಿ ರಾಜ್ಯಪಾಲ ರಾಮ ನಾಯಕ್, ಉಪ ಮುಖ್ಯಮಂತ್ರಿ ದಿನೇಶ್ ಶರ್ಮಾ ಉಪಸ್ಥಿತರಿದ್ದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos