ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ 
ದೇಶ

ಜಯಲಲಿತಾ ಆರೋಗ್ಯ ಕುರಿತು ತಮಿಳುನಾಡು ಮಾಜಿ ಮುಖ್ಯ ಕಾರ್ಯದರ್ಶಿಗಳು ನೀಡಿದ್ದ ಮಾಹಿತಿ ತಪ್ಪು: ಸಿಎಂ ಪಳನಿಸ್ವಾಮಿ

ದಿವಂಗತ ಜೆ.ಜಯಲಲಿತಾ ಅವರ ಆರೋಗ್ಯ ಕುರಿತಂತೆ ತಮಿಳುನಾಡು ಮಾಜಿ ಮುಖ್ಯ ಕಾರ್ಯದರ್ಶಿ ಪಿ.ರಾಮ ಮೋಹನ ರಾವ್ ಅವರು ತಪ್ಪು ಮಾಹಿತಿ ನೀಡಿದ್ದಾರೆಂದು ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿಯವರು ಸೋಮವಾರ ಹೇಳಿದ್ದಾರೆ...

ಕೊಯಿಮತ್ತೂರು: ದಿವಂಗತ ಜೆ.ಜಯಲಲಿತಾ ಅವರ ಆರೋಗ್ಯ ಕುರಿತಂತೆ ತಮಿಳುನಾಡು ಮಾಜಿ ಮುಖ್ಯ ಕಾರ್ಯದರ್ಶಿ ಪಿ.ರಾಮ ಮೋಹನ ರಾವ್ ಅವರು ತಪ್ಪು ಮಾಹಿತಿ ನೀಡಿದ್ದಾರೆಂದು ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿಯವರು ಸೋಮವಾರ ಹೇಳಿದ್ದಾರೆ. 
ಕೊಯಿಮತ್ತೂರಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಜಯಲಲಿತಾ ಅವರ ಆರೋಗ್ಯದ ಬಗ್ಗೆ ರಾವ್ ಅವರು ಜನರಿಗೆ ತಪ್ಪು ಮಾಹಿತಿಗಳನ್ನು ನೀಡಿದ್ದಾರೆ. ತಮ್ಮ ಹೇಳಿಕೆ ಮೂಲಕ ಯಾರನ್ನು ರಕ್ಷಣೆ ಮಾಡಲು ಯತ್ನ ನಡೆಸಿದ್ದಾರೆಂದು ಆರೋಪಿಸಿದ್ದಾರೆ. 
ಇದೇ ವೇಳೆ ಕಾವೇರಿ ವಿವಾದ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಟ್ವಿಟ್ಟರ್ ಹಾಗೂ ಫೇಸ್ ಬುಕ್ ಗಳಿಂದ ವಿವಾದ ಇತ್ಯರ್ಥಗೊಳ್ಳುವುದಿಲ್ಲ. ಕಾನೂನಿನಿಂದ ಮಾತ್ರ ಸಾಧ್ಯ ಎಂದು ತಿಳಿಸಿದ್ದಾರೆ. 
ಸುಪ್ರೀಂಕ್ರೋಟ್ ಆದೇಶದಂತೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡುವಂತೆ ಈಗಾಗಲೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮನವಿ ಪತ್ರವನ್ನು ಸಲ್ಲಿಸಿದ್ದೇವೆ ಎಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel