ದೇಶ

ಹೈದರಾಬಾದ್ ಮೆಕ್ಕಾ ಮಸೀದಿ ಸ್ಫೋಟ ಪ್ರಕರಣದ ತೀರ್ಪಿನಿಂದ ನ್ಯಾಯ ಸಿಕ್ಕಿಲ್ಲ: ಓವೈಸಿ

Nagaraja AB

ಹೈದ್ರಾಬಾದ್  :2007ರ  ಮೆಕ್ಕಾ ಮಸೀದಿ ಸ್ಫೋಟಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ 5 ಆರೋಪಿಗಳನ್ನು  ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿದ್ದು, ರಾಷ್ಟ್ರೀಯ ತನಿಖಾ ದಳ ಸರಿಯಾಗಿ ತನಿಖೆ ನಡೆಸಿಲ್ಲ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.

2004 ರ ನಂತರ ಮೆಕ್ಕಾ ಮಸೀದಿ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದ ಪ್ರತ್ಯೇಕ್ಷದರ್ಶಿಗಳು ವಿರುದ್ಧವಾಗಿ ಹೇಳಿಕೆ ನೀಡಿದ್ದು, ನಿರೀಕ್ಷಿತ ರೀತಿಯಲ್ಲಿ ರಾಷ್ಟ್ರೀಯ ತನಿಖಾ ದಳ ತನಿಖೆ ನಡೆಸಿಲ್ಲ  ಎಂದು ಅವರು ಹೇಳಿದ್ದಾರೆ.

ದೇಶದಲ್ಲಿನ ಅಪರಾಧ ನ್ಯಾಯ ವ್ಯವಸ್ಥೆ ಕುರಿತು ಪ್ರತಿಕ್ರಿಯಿಸಿದ ಓವೈಸಿ ಈ ಪ್ರಕರಣದಲ್ಲಿ ನ್ಯಾಯ ಸಿಕ್ಕಿಲ್ಲ . ಆರೋಪಿಗಳಿಗೆ ಜಾಮೀನು ಸಿಕ್ಕುವ ಮುಂಚಿತವಾಗಿ ಮೋದಿ ಸರ್ಕಾರ ಹಾಗೂ ರಾಷ್ಟ್ರೀಯ ತನಿಖಾ ದಳ ಮೇಲ್ಮನವಿ ಸಲ್ಲಿಸಲಿಲ್ಲ.

 ಇದು  ಸಂಪೂರ್ಣ ಪಕ್ಷಪಾತದಿಂದ ಕೂಡಿದ್ದು, ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ದುರ್ಬಲಗೊಂಡಾಂತಾಗಿ ನ್ಯಾಯ ಸಿಕ್ಕಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

2007ರಲ್ಲಿ ಸಂಭವಿಸಿದ ಮೆಕ್ಕಾ ಮಸೀದಿ ಸ್ಪೋಟ ಪ್ರಕರಣದಲ್ಲಿ 9 ಜನರು ಸಾವನ್ನಪ್ಪಿ, ಹಲವು ಮಂದಿ ಗಾಯಗೊಂಡಿದ್ದರು. ಸ್ವಾಮಿ ಅಸೀಮಾನಂದ್ ಸೇರಿದಂತೆ ಐವರು ಆರೋಪಿಗಳನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

ಈ ಪ್ರಕರಣ ಸಂಬಂಧ ಮತ್ತಿಬ್ಬರು ಆರೋಪಿಗಳು ಇನ್ನೂ ಪೊಲೀಸರಿಗೆ ಕೈಗೆ ಸಿಕ್ಕಿಲ್ಲ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

SCROLL FOR NEXT