ನವದೆಹಲಿ : ದೇಶದಲ್ಲಿ ಹೆಚ್ಚಾಗುತ್ತಿರುವ ಅತ್ಯಾಚಾರ ಪ್ರಕರಣಗಳ ಬಗ್ಗೆ ಹೆಸರಾಂತ ಬಾಕ್ಸರ್ , ರಾಜ್ಯಸಭಾ ಸದಸ್ಯೆ ಮೇರಿ ಕೋಮ್, ನೋವು ಹಾಗೂ ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ.
2012ರಲ್ಲಿ ನಡೆದಿದ್ದ ನಿರ್ಭಯಾ ಅತ್ಯಾಚಾರ ನಂತರ ಕತುವಾ ಹಾಗೂ ಉನ್ನಾವೊ ಅತ್ಯಾಚಾರ ಪ್ರಕರಣಗಳು ದೇಶವನ್ನು ಬೆಚ್ಚಿ ಬೀಳಿಸಿದ್ದು, ಎಲ್ಲೆಡೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.
8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿರುವುದು ಮಹಿಳೆಯಾಗಿ ತಮ್ಮಗೆ ಅತೀವ ನೋವುಂಟುಮಾಡಿದೆ. ಭಾರತೀಯಳಾಗಿ ಇದರ ಬಗ್ಗೆ ದು:ಖವಾಗುತ್ತಿದ್ದು, ಅಸಹಾಯಕತೆ ಮನೋಭಾವ ಕಾಡುತ್ತಿದೆ ಎಂದು ಅವರು ಹೇಳಿದ್ದಾರೆ.
ತಪಿತಸ್ಥರ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮೇರಿ ಕೋಮ್ ಗೋಲ್ಟ್ ಕೋಸ್ಟ್ ನಿಂದ ಹಿಂದಿರುಗಿದ ಬಳಿಕ ಟಿವಿ ಚಾನೆಲ್ ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.
ಜಮ್ಮು-ಕಾಶ್ಮೀರದ ಕತುವಾದಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದರೆ, ಉತ್ತರ ಪ್ರದೇಶದ ಉನ್ನಾವೊದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇರೆಗೆ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ನನ್ನು ಪೊಲೀಸರು ಬಂಧಿಸಿದ್ದಾರೆ.