ಸ್ಮೃತಿ ಇರಾನಿ 
ದೇಶ

ಸಚಿವೆ ಸ್ಮೃತಿ ಇರಾನಿ ಜೊತೆ ಅನುಚಿತ ವರ್ತನೆ: ದೆಹಲಿ ವಿವಿ 4 ವಿದ್ಯಾರ್ಥಿಗಳ ವಿರುದ್ಧ ಚಾರ್ಜ್ ಶೀಟ್

: 2017ರ ಎಪ್ರಿಲ್‌ ನಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಜೊತೆ ಅನುಚಿಕವಾಗಿ ವರ್ತಿಸಿದ್ದ ನಾಲ್ವರು ದೆಹಲಿ ವಿವಿ ವಿದ್ಯಾರ್ಥಿಗಳ ವಿರುದ್ಧ ದೆಹಲಿ

ನವದೆಹಲಿ: 2017ರ ಎಪ್ರಿಲ್‌ ನಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಜೊತೆ ಅನುಚಿಕವಾಗಿ ವರ್ತಿಸಿದ್ದ ನಾಲ್ವರು ದೆಹಲಿ ವಿವಿ ವಿದ್ಯಾರ್ಥಿಗಳ ವಿರುದ್ಧ ದೆಹಲಿ ಪೊಲೀಸರು ಚಾರ್ಜ್ ಶೀಟ್ ದಾಖಲಿಸಿದ್ದಾರೆ.
ದೆಹಲಿಯ ಇಂದಿರಾ ಗಾಂಧಿ ವಿಮಾನ ನಿಲ್ದಾಣದಿಂದ ಕಾರಿನಲ್ಲಿ ನಗರದ ಚಾಣಕ್ಯಪುರಿಯಲ್ಲಿನ ತಮ್ಮ ನಿವಾಸಕ್ಕೆ ವಾಪಾಸಗುತ್ತಿದ್ದಾಗ ಕುಡಿದ ಅಮಲಿನಲ್ಲಿದ್ದ ನಾಲ್ವರು ದೆಹಲಿ ವಿವಿ ವಿದ್ಯಾರ್ಥಿಗಳು ಅವರ ಕಾರನ್ನು ಅಟ್ಟಿಸಿಕೊಂಡು ಹೋಗಿ ಅಶ್ಲೀಲ ಸಂಜ್ಞೆಗಳನ್ನು ಮಾಡುವ ಮೂಲಕ ಲೈಂಗಿಕ ಕುಚೋದ್ಯ ತೋರಿದ್ದಕ್ಕಾಗಿ ಬಂಧಿಸಿ ನಂತರ, ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದರು. 
ಈ ಘಟನೆ ನಡೆದ ಒಂದು ವರ್ಷವಾಗುತ್ತಾ ಬಂದಿದ್ದು ದೆಹಲಿ ಪೊಲೀಸರು ನಾಲ್ವರು ಆರೋಪಿ ವಿದ್ಯಾರ್ಥಿಗಳ ವಿರುದ್ಧ ಚಾರ್ಜ್‌ ಶೀಟ್‌ ಫೈಲ್‌ ಮಾಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.. 
ಅಂದು ಸಚಿವೆ ಸ್ಮೃತಿ ಇರಾನಿ ಅವರು ಕೊಟ್ಟಿದ್ದ ದೂರಿನ ಪ್ರಕಾರ ಪೊಲೀಸರು ನಾಲ್ವರು ಆರೋಪಿ ದೆಹಲಿ ವಿವಿ ವಿದ್ಯಾರ್ಥಿಗಳ ವಿರುದ್ದ ಐಪಿಸಿ ಸೆ.354ಡಿ (ಮಹಿಳೆಯನ್ನು ಬೆನ್ನಟ್ಟಿ ಪೀಡಿಸುವುದು), ಸೆ.509 (ಮಹಿಳೆಯನ್ನು ಅವಮಾನಿಸುವ ರೀತಿಯಲ್ಲಿ ಅಶ್ಲೀಲ ಪದಗಳನ್ನು, ಸಂಜ್ಞೆಗಳನ್ನು ವ್ಯಕ್ತಪಡಿಸುವುದು) ಪ್ರಕಾರ ಕೇಸು ದಾಖಲಿಸಿದ್ದರು.
ಅಂದು ಸಚಿವೆ ಇರಾನಿ ಅವರ ದೂರಿನ ಪ್ರಕಾರ ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದ ನಾಲ್ವರು ವಿದ್ಯಾರ್ಥಿಗಳನ್ನು ವೈದ್ಯಕೀಯ ಪರೀಕ್ಷೆಗೆ ಗುರಿಪಡಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ