ದೇಶ

ಉನ್ನಾವೋ ಅತ್ಯಾಚಾರ ಪ್ರಕರಣ: ಸಿಬಿಐನಿಂದ 4ನೇ ಆರೋಪಿ ವಿರುದ್ಧ ಪ್ರಕರಣ ದಾಖಲು

Manjula VN
ಲಖನೌ: ದೇಶದಾದ್ಯಂತ ಸುದ್ದಿಗೆ ಗ್ರಾಸವಾಗಿದ್ದ ಉತ್ತರಪ್ರದೇಶ ಉನ್ನಾವೋ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ನಾಲ್ಕನೇ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ಮಂಗಳವಾರ ತಿಳಿದುಬಂದಿದೆ. 
ಪ್ರಕರಣದ ಪ್ರಮುಖ ಆರೋಪಿ ಎಂದು ಹೇಳಲಾಗುತ್ತಿರುವ ಬಿಜೆಪಿ ಶಾಸಕ ಕುಲ್ದೀಪ್ ಸಿಂಗ್ ಸೆಂಗಾರ್ ಅವರ ಆಪ್ತರಾಗಿರುವ ಶಶಿ ಸಿಂಗ್ ಅವರ ಪುತ್ರ ಶುಭಂ ವಿರುದ್ದ ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ ಎಂದು ವರದಿಗಳು ತಿಳಿಸಿವೆ. 
ಈಗಾಗಲೇ ಬಿಜೆಪಿ ಶಾಸಕನ ಆಪ್ತ ಶಶಿ ಸಿಂಗ್ ಅವರನ್ನೂ ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದು. ನ್ಯಾಯಾಲಯ ಶಶಿ ಅವನ್ನು ಏ.19ರವರೆಗೂ ಪೊಲೀಸರ ವಶಕ್ಕೆ ನೀಡಿದೆ. 
SCROLL FOR NEXT