ನವದೆಹಲಿ; ಸುಳ್ಳು ಸುದ್ದಿ ಹಬ್ಬಿಸಲು ಬಿಜೆಪಿಗೆ ಫೇಸ್'ಬುಕ್ ಮತ್ತು ಟ್ವಿಟ್ವರ್ ನಂತರ ಸಾಮಾಜಿಕ ಜಾಲತಾಣಗಳ ವೇದಿಕೆಗಳು ಅಗತ್ಯವಿಲ್ಲ, ಅವರಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ ಇದ್ದಾರೆ ಎಂದು ಕಾಂಗ್ರೆಸ್ ಮಾಜಿ ಸಂಸದೆ ರಮ್ಯಾ ಅವರು ಮಂಗಳವಾರ ಹೇಳಿದ್ದಾರೆ.
ಖಾಸಗಿ ಸುದ್ದಿ ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ರಮ್ಯಾ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಸಂದರ್ಶನದ ಲೇಖನವನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.