ಸಾಂದರ್ಭಿಕ ಚಿತ್ರ 
ದೇಶ

ನಗದು ಬಿಕ್ಕಟ್ಟು: ಬ್ಯಾಂಕ್ ನೌಕರರ ಸಂಘದಿಂದ ಮುಷ್ಕರದ ಎಚ್ಚರಿಕೆ

ನಗದು ಬಿಕ್ಕಟ್ಟು ಪರಿಹರಿಸದಿದ್ದರೆ ದೇಶಾದ್ಯಂತ ಮುಷ್ಕರ ನಡೆಸುವುದಾಗಿ ಅಖಿಲ ಭಾರತ ಬ್ಯಾಂಕ್ ನೌಕರರ...

ವಡೊದರ: ನಗದು ಬಿಕ್ಕಟ್ಟು ಪರಿಹರಿಸದಿದ್ದರೆ ದೇಶಾದ್ಯಂತ ಮುಷ್ಕರ ನಡೆಸುವುದಾಗಿ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ(ಎಐಬಿಇಎ) ಗುರುವಾರ ಎಚ್ಚರಿಕೆ ನೀಡಿದೆ.
ನಗದು ಕೊರತೆ ನೀಗಿಸಲು ಕೇವಲ ಹೇಳಿಕೆ ನೀಡದರೆ ಸಾಕಾಗುವುದಿಲ್ಲ. ನೋಟು ವಿತರಣೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಎಐಬಿಇಎ ಪ್ರಧಾನ ಕಾರ್ಯದರ್ಶಿ ಸಿಎಚ್ ವೆಂಕಟಾಚಲಂ ಅವರು ಹೇಳಿದ್ದಾರೆ.
ಕಳೆದ ಕೆಲವು ವಾರಗಳಿಂದ ಉತ್ತರ ಪ್ರದೇಶ, ಮಧ್ಯ ಪ್ರದೇಶ, ರಾಜಸ್ಥಾನ, ಆಂಧ್ರ ಪ್ರದೇಶ, ತೆಲಂಗಾಣ ಮತ್ತು ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳ ಎಟಿಎಂಗಳು ನಗದು ಕೊರತೆ ಎದುರಿಸುತ್ತಿವೆ. 
ಹಣ ಸಿಗದೆ ಪರದಾಡುತ್ತಿರುವ ಜನ ಬ್ಯಾಂಕ್ ನೌಕರರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ವೆಂಕಟಾಚಲಂ ಅವರು ತಿಳಿಸಿದ್ದಾರೆ.
ಬ್ಯಾಂಕ್ ನೌಕರರು ಯಾವುದೇ ತಪ್ಪು ಮಾಡದಿದ್ದರೂ ಗ್ರಾಹಕರಿಂದ ನಿಂದಿಸಿಕೊಳ್ಳುವ ಪರಿಸ್ಥಿತಿ ಬಂದಿದ್ದು, ಕೇಂದ್ರ ಸರ್ಕಾರ ಮತ್ತು ಆರ್ ಬಿಐ ಈ ಕೂಡಲೇ ನಗದು ಕೊರತೆ ನೀಗಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?