ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಪ್ರದೇಶ : ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಆರೋಪಿ ಬಂಧನ

ಭಯಾನಕವಾದ ಕಥುವಾ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳು ರಾಷ್ಟ್ರವನ್ನು ಬೆಚ್ಚಿಬೀಳಿಸಿದ ಬಳಿಕ ಇದೀಗ ಇನ್ನೊಂದು ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ.

ಸಿದ್ದಾರ್ಥನಗರ(ಉತ್ತರ ಪ್ರದೇಶ): ಭಯಾನಕವಾದ ಕಥುವಾ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳು ರಾಷ್ಟ್ರವನ್ನು ಬೆಚ್ಚಿಬೀಳಿಸಿದ  ಬಳಿಕ ಇದೀಗ ಇನ್ನೊಂದು ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಸಿದ್ದಾರ್ಥನಗರದಲ್ಲಿ ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ.
ಬರಾತ್ ಮೆರವಣಿಗೆ ನೋಡಲು ಮನೆಯಿಂದ ತೆರಳಿದ್ದ ಆರು ವರ್ಷದ ಬಾಲಕಿ ಮೇಲೆ ಸಿದ್ದಾರ್ಥ ನಗರ ಪ್ರದೇಶದ ಗ್ರಾಮಸ್ಥನೊಬ್ಬ ಅತ್ಯಾಚರ ನಡೆಸಿದ್ದಾನೆ.
ಆರೋಪಿಯು ಬಾಲಕಿಯನ್ನು ಖಾಲಿ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಸಂತ್ರಸ್ತ ಬಾಲಕಿ ಗ್ರಾಮದ ಹೊರವಲಯದಲ್ಲಿ ಪ್ರಜ್ಞಾಹೀನಳಾಗಿ ಬಿದ್ದಿದ್ದು ಕಂಡುಬಂದಿದೆ. ಆಕೆಯನ್ನು ತಕ್ಷಣ ಹತ್ತಿರದ ಆಸ್ಪತ್ರೆಗೆ ದಾಕಲಿಸಲಾಗಿದೆ.
ಆರೋಪಿಯನ್ನು ಪೋಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
ಒಟ್ಟಾರೆ ಕಥುವಾ ಮತ್ತು ಉನ್ನಾವೋ ಅತ್ಯಾಚಾರ ಪ್ರಕರಣಗಳು ಮಾಸುವ ಮುನ್ನವೇ ಇನ್ನೊಂದು ಹೇಯ ಕೃತ್ಯ ನಡೆದಿರುವುದು ನಿಜಕ್ಕೂ ಆಘಾತಕಾರಿ ಸಂಗತಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT