ಸಂಗ್ರಹ ಚಿತ್ರ 
ದೇಶ

ಮೋದಿ, ಪಾಕ್ ಪ್ರಧಾನಿ ಅಬ್ಬಾಸಿ ನಡುವೆ ಯಾವುದೇ ಭೇಟಿಗಳೂ ನಡೆದಿಲ್ಲ; ವಿದೇಶಾಂಗ ಸಚಿವಾಲಯ

ಕಾಮನ್ ವೆಲ್ತ್ ರಾಷ್ಟ್ರಗಳ ಮುಖ್ಯಸ್ಥರ ಶೃಂಗದ ವೇಳೆ ಪಾಕಿಸ್ತಾನ ಪ್ರಧಾನಮಂತ್ರಿ ಶಾಹಿದ್ ಖಾಕನ್ ಅಬ್ಬಾಸಿ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ನಡುವೆ ಯಾವುದೇ ರೀತಿಯ ಭೇಟಿಗಳೂ ನಡೆದಿಲ್ಲ ಎಂದು ವಿದೇಶಾಂಗ ಸಚಿವಾಲಯ ಶುಕ್ರವಾರ ಸ್ಪಷ್ಟಪಡಿಸಿದೆ...

ಲಂಡನ್; ಕಾಮನ್ ವೆಲ್ತ್ ರಾಷ್ಟ್ರಗಳ ಮುಖ್ಯಸ್ಥರ ಶೃಂಗದ ವೇಳೆ ಪಾಕಿಸ್ತಾನ ಪ್ರಧಾನಮಂತ್ರಿ ಶಾಹಿದ್ ಖಾಕನ್ ಅಬ್ಬಾಸಿ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ನಡುವೆ ಯಾವುದೇ ರೀತಿಯ ಭೇಟಿಗಳೂ ನಡೆದಿಲ್ಲ ಎಂದು ವಿದೇಶಾಂಗ ಸಚಿವಾಲಯ ಶುಕ್ರವಾರ ಸ್ಪಷ್ಟಪಡಿಸಿದೆ.
ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ಸಚಿವಾಲಯ ವಕ್ತಾರ ರವೀಶ್ ಕುಮಾರ್ ಅವರು, ಕಾಮನ್ ವೆಲ್ತ್ ರಾಷ್ಟ್ರಗಳ ಮುಖ್ಯಸ್ಥರ ಶೃಂಗದ ವೇಳೆ ಪಾಕಿಸ್ತಾನದೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದ್ವಿಪಕ್ಷೀಯ ಮಾತುಕತೆ ನಡೆಸುತ್ತಾರೆಂದು ಕಳೆದ ವಾರ ಹೇಳಲಾಗುತ್ತಿತ್ತು. ಆದರೆ, ಮೋದಿಯವರು ಪಾಕಿಸ್ತಾನ ಪ್ರಧಾನಮಂತ್ರಿಗಳೊಂದಿಗೆ ಯಾವುದೇ ರೀತಿಯ ಮಾತುಗಳನ್ನು ನಡೆಸಿಲ್ಲ ಹಾಗೂ ಮಾತುಕತೆ ನಡೆಸುವ ಕುರಿತು ಯಾವುದೇ ಚಿಂತನೆಗಳೂ ನಡೆದಿಲ್ಲ ಎಂದು ಹೇಳಿದ್ದಾರೆ.
2015ರ ಡಿಸೆಂಬರ್ ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಫ್ಘಾನಿಸ್ತಾನಕ್ಕೆ ಭೇಟಿ ನೀಡಿದ್ದರು. ಅಫ್ಘಾನಿಸ್ತಾನದಿಂದ ಮರಳಿ ಭಾರತಕ್ಕೆ ಬರುವ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಪಾಕಿಸ್ತಾನಕ್ಕೆ ತೆರಳಿ ಅಂದಿನ ಪಾಕಿಸ್ತಾನದ ಪ್ರಧಾನಮಂತ್ರಿಗಳಾಗಿದ್ದ ನವಾಜ್ ಶರೀಫ್ ಅವರ ಮೊಮ್ಮಗಳ ವಿವಾಹ ಸಂಭ್ರಮದಲ್ಲಿ ಭಾಗಿ ವಾಪಸ್ಸಾಗಿದ್ದರು. 
ಇದಾದ ಕೆಲವೇ ದಿನಗಳ ಬಳಿಕ ಪಠಾಣ್ ಕೋಟ್ ವಾಯುನೆಲೆ ಮೇಲೆ ಪಾಕಿಸ್ತಾನ ಉಗ್ರರು ದಾಳಿ ನಡೆಸಿದ್ದರು. ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ಮತ್ತೆ ಉದ್ವಿಗ್ನ ವಾತಾವರಣ ಆರಂಭಗೊಂಡಿತ್ತು. ಇದೇ ವರ್ಷದ ಸೆಪ್ಟೆಂಬರ್ ನಲ್ಲಿ ಉರಿ ಸೆಕ್ಟರ್ ಮೇಲೂ ಉಗ್ರರು ದಾಳಿ ನಡೆಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್