ದೇಶ

ಸಾರ್ವಜನಿಕವಾಗಿ ಸಿಜೆಐ ಪದಚ್ಯುತಿ ನಿಲುವಳಿ ನೋಟಿಸ್ ಚರ್ಚೆ ನೋವು ತಂದಿದೆ: ಸುಪ್ರೀಂ ಕೋರ್ಟ್

Sumana Upadhyaya

ನವದೆಹಲಿ: ಭಾರತದ ಮುಖ್ಯ ನ್ಯಾಯಾಧೀಶರನ್ನು ತೆಗೆದುಹಾಕುವ ಬಗ್ಗೆ ಸಂಸದರು ನೀಡಿರುವ ಸಾರ್ವಜನಿಕ ಹೇಳಿಕೆ ಅತ್ಯಂತ ಆತಂಕವನ್ನು ತಂದೊಡ್ಡಿದೆ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ.

ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ರಾಜ್ಯಸಭಾ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಅವರಿಗೆ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ವಿರುದ್ಧ ಪದಚ್ಯುತಿ ನಿಲುವಳಿ ನೋಟಿಸ್ ನೀಡುವಂತೆ ಅರ್ಜಿ ಸಲ್ಲಿಸುವ ಸ್ವಲ್ಪ ಹೊತ್ತಿಗೆ ಮೊದಲು ಅರ್ಜಿಯೊಂದರ ವಿಚಾರಣೆ ನಡೆಸಿದ ನ್ಯಾಯಾಲಯ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ನಿಗದಿತ ಅಂಶದವರೆಗೆ ಪದಚ್ಯುತಿ ಎಂಬ ವಿಷಯವನ್ನು ಸಾರ್ವಜನಿಕಗೊಳಿಸಲು ಸಾಧ್ಯವಿಲ್ಲ ಎಂಬ ಕಾನೂನು ಇದ್ದರೂ ಕೂಡ ರಾಜಕೀಯ ವ್ಯಕ್ತಿಗಳು ಸಾರ್ವಜನಿಕ ಚರ್ಚೆಗಳನ್ನು ನಡೆಸುವುದು ತೀರಾ ದುರದೃಷ್ಟಕರ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ನಾವೆಲ್ಲರೂ ಈ ಘಟನೆಯಿಂದ ನೊಂದಿದ್ದೇವೆ ಎಂದು ನ್ಯಾಯಮೂರ್ತಿ ಸಿಕ್ರಿ ಹೇಳಿದ್ದಾರೆ.
ಬಿಜೆಪಿ ಅಧ್ಯಕ್ಷ ಅಮಿತ್ ಶಾ ನ್ಯಾಯಾಲಯದಿಂದ ಖುಲಾಸೆಗೊಂಡಿರುವ ಸೊಹ್ರಬುದ್ಧೀನ್ ನಕಲಿ ಎನ್ ಕೌಂಟರ್ ಕೇಸಿನ ತನಿಖೆ ನಡೆಸುತ್ತಿರುವ ವಿಶೇಷ ಸಿಬಿಐ ನ್ಯಾಯಾಧೀಶ ಬಿ.ಎಚ್.ಲೋಯಾ ಅವರ ಸಾವಿನ ಕುರಿತು ಸ್ವತಂತ್ರ ತನಿಖೆ ಕೋರಿ ಕಾಂಗ್ರೆಸ್ ನಾಯಕ ಟೆಹ್ಸೀನ್ ಪೂನಾವಾಲ್ಲ ಅವರ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ಈ ಅಂಶ ಹೇಳಿದೆ.

SCROLL FOR NEXT