ಕೆವೈಸಿ ನಿಯಮದಡಿ ಬ್ಯಾಂಕ್ ಖಾತೆಗೆ ಆಧಾರ್ ಕಡ್ಡಾಯ: ಆರ್ ಬಿಐ ಹೊಸ ಮಾರ್ಗಸೂಚಿ
ಕೆವೈಸಿ(ನಿಮ್ಮ ಗ್ರಾಹಕರನ್ನು ತಿಳಿಯಿರಿ) ನಿಯಮದಡಿ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯ...
ನವದೆಹಲಿ: ಕೆವೈಸಿ(ನಿಮ್ಮ ಗ್ರಾಹಕರನ್ನು ತಿಳಿಯಿರಿ) ನಿಯಮದಡಿ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಹೇಳಿದೆ.
ನಿನ್ನೆ ತಡರಾತ್ರಿ ಆರ್ ಬಿಐ ಬಿಡುಗಡೆ ಮಾಡಿರುವ ಹೊಸ ಮಾರ್ಗಸೂಚಿ ಪ್ರಕಾರ, ಆಧಾರ್ ಕಡ್ಡಾಯ ಸುಪ್ರೀಂ ಕೋರ್ಟ್ ಅಂತಿಮ ನಿರ್ಧಾರಕ್ಕೆ ಒಳಪಟ್ಟಿದ್ದು, ಕೋರ್ಟ್ ಅಂತಿಮ ನಿರ್ಧಾರ ಬರುವವರೆಗೂ, ಈ ಮಾರ್ಗದರ್ಶಿ ಮಾತ್ರ ಅನುಸರಿಸಬೇಕಿದೆ ಎಂದು ಸ್ಪಷ್ಟಪಡಿಸಿದೆ.
ಈವರೆಗಿನ ಆರ್ ಬಿಐನ ಕೆವೈಸಿ ನಿಯಮಗಳ ಪ್ರಕಾರ ಗ್ರಾಹಕರು ತಮ್ಮ ಬ್ಯಾಂಕ್ ಖಾತೆಗೆ ಐಟಿ ಇಲಾಖೆ ಕೊಟ್ಟಿರುವ ಪ್ಯಾನ್ ನಂಬರ್ ಮತ್ತು ಈಚಿನ ಪಾಸ್‌ಪೋರ್ಟ್ ಗಾತ್ರದ ಫೋಟೋ ಸಲ್ಲಿಸುವುದು ಅಗತ್ಯವಾಗಿದೆ. ಆದರೆ ಆರ್‌ಬಿಐ ತಿದ್ದುಪಡಿ ಮಾಡಿರುವ ತನ್ನ ಕೆವೈಸಿ ನಿಯಮಗಳ ಪ್ರಕಾರ ಬ್ಯಾಂಕ್ ಖಾತೆಗೆ ಆಧಾರ್ ನಂಬರ್ ಜೋಡಣೆಯನ್ನು ಕಡ್ಡಾಯ ಮಾಡಿದೆ.
ಈ ಮಾರ್ಗದರ್ಶಿ ಎಲ್ಲಾ ಬ್ಯಾಂಕ್ ಗಳು ಮತ್ತು ಇತರ ಕಂಪನಿಗಳಿಗೆ ಅನ್ವಯಿಸುತ್ತದೆ ಎಂದು ರಿಸರ್ವ್ ಬ್ಯಾಂಕ್ ಹೇಳಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.