ಕಾಂಗ್ರೆಸ್ ಹಿರಿಯ ಮುಖಂಡ ಅಶ್ವಿನ್ ಕುಮಾರ್ 
ದೇಶ

ಸಂಸತ್ ಸದಸ್ಯನಾಗಿದಿದ್ದರೆ, ಸಿಜೆಐ ವಿರುದ್ದದ ಪದಚ್ಯುತಿ ನಿಲುವಳಿಗೆ ಸಹಿ ಹಾಕುತ್ತಿರಲಿಲ್ಲ: ಕಾಂಗ್ರೆಸ್ ಮುಖಂಡ ಅಶ್ವಿನ್ ಕುಮಾರ್

ನಾನೇನಾದರೂ ಸಂಸತ್ ಸದಸ್ಯನಾಗಿದಿದ್ದರೆ ಖಂಡಿತಾ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ವಿರುದ್ಧದ ಪದಚ್ಯುತಿ ನಿಲುವಳಿಗೆ ಸಹಿ ಹಾಕುತ್ತಿರಲಿಲ್ಲ ಎಂದು ಕಾಂಗ್ರೆಸ್ ಪಕ್ಷದ ಮಾಜಿ ಮುಖಂಡ ಅಶ್ವಿನ್ ಕುಮಾರ್ ಅವರು ಹೇಳಿದ್ದಾರೆ.

ನವದೆಹಲಿ: ನಾನೇನಾದರೂ ಸಂಸತ್ ಸದಸ್ಯನಾಗಿದಿದ್ದರೆ ಖಂಡಿತಾ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ವಿರುದ್ಧದ ಪದಚ್ಯುತಿ ನಿಲುವಳಿಗೆ ಸಹಿ ಹಾಕುತ್ತಿರಲಿಲ್ಲ ಎಂದು ಕಾಂಗ್ರೆಸ್ ಪಕ್ಷದ ಮಾಜಿ ಮುಖಂಡ ಅಶ್ವಿನ್ ಕುಮಾರ್ ಅವರು ಹೇಳಿದ್ದಾರೆ.
ಭಾರತದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ವಿರುದ್ಧ ಕಾಂಗ್ರೆಸ್ ಸೇರಿದಂತೆ ಒಟ್ಟು 7 ವಿಪಕ್ಷಗಳು ಮಂಡಿಸಲು ಮುಂದಾಗಿರುವ ಪದಚ್ಯುತಿ ನಿಲುವಳಿ ವಿಚಾರ ಇದೀಗ ದೇಶಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಪದಚ್ಯುತಿ ನಿಲುವಳಿ ವಿಚಾರ ಸಾರ್ವಜನಿಕವಾಗಿ ಚರ್ಚೆಯಾಗುತ್ತಿರುವುದು ದುಃಖಕರ ಸಂಗತಿ ಎಂದು ಸ್ವತಃ ಸುಪ್ರೀಂ ಕೋರ್ಟ್ ವಿಷಾಧ ವ್ಯಕ್ತಪಡಿಸಿದೆ. ಇದರ ನಡುವೆಯೇ ಕಾಂಗ್ರೆಸ್ ಪಕ್ಷ ಮಾಜಿ ರಾಜ್ಯಸಭಾ ಸದಸ್ಯ ಅಶ್ವಿನ್ ಕುಮಾರ್ ಅವರು ಈ ಬಗ್ಗೆ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ.
ದೆಹಲಿಯಲ್ಲಿ ಮಾತನಾಡಿದ ಅವರು, ನಾನು ಸಂಸತ್ ಸದಸ್ಯನಾಗಿದಿದ್ದರೆ, ಸಿಜೆಐ ಪದಚ್ಯುತಿಗೊಳಿಸುವ ನಿಲುವಳಿಗೆ ಸಹಿ ಹಾಕುವಂತೆ ಯಾರಾದರೂ ತಂದು ನನ್ನ ಮುಂದಿಟ್ಟರೆ ಖಂಡಿತಾ ನಾನು ಈ ನಿಲುವಳಿಗೆ ಸಹಿ ಹಾಕುತ್ತಿರಲಿಲ್ಲ. ಅನಗತ್ಯ ವಿವಾದದಲ್ಲಿ ಸಿಲುಕುವುದು ನನಗೆ ಇಷ್ಟವಿಲ್ಲ. ಕೆಲ ತತ್ವಾದರ್ಶಗಳನ್ನು ನಾನು ಪಾಲಿಸಿಕೊಂಡು ಬರುತ್ತಿದ್ದೇನೆ ಎಂದು ಹೇಳಿದ್ದಾರೆ. 
ನನ್ನ ಅಭಿಪ್ರಾಯದಂತೆ ಸಿಜೆಐ ವಿರುದ್ಧ ಪದಚ್ಯುತಿ ನಿಲುವಳಿ ನಿರ್ಣಯ ನಿಜಕ್ಕೂ ತೀವ್ರ ಪ್ರಮಾಣದ ನಡೆಯಾಗಿದ್ದು, ಇಂತಹ ಕಠಿಣ ಕ್ರಮವನ್ನು ತಡೆಯಬೇಕಿತ್ತು ಎಂದು ಅಶ್ವಿನ್ ಕುಮಾರ್ ಹೇಳಿದ್ದಾರೆ.
ಅಶ್ವಿನ್ ಕುಮಾರ್ ಅವರು ಕಾಂಗ್ರೆಸ್ ಪಕ್ಷ ಮಾಜಿ ರಾಜ್ಯಸಭಾ ಸದಸ್ಯರಾಗಿದ್ದು, 2002ರಲ್ಲಿ ಕಾಂಗ್ರೆಸ್ ಪಕ್ಷದಿಂದ ಪಂಜಾಬ್ ನಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಅಂತೆಯೇ ಕಾಂಗ್ರೆಸ್ ಪಕ್ಷದ ವಕ್ತಾರರಾಗಿಯೂ ಕೆಲಸ ಮಾಡಿದ್ದ ಅಶ್ವಿನ್ ಕುಮಾರ್ ಅವರು ಯುಪಿಎ ಸರ್ಕಾರದ ಅವಧಿಯಲ್ಲಿ ಅಟಾರ್ನಿ ಜನರಲ್ ಆಗಿಯೂ ಸೇವೆ ಸಲ್ಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಧಾರವಾಡ: ಕಾರು - ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು!

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಯೋಗೀಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್‌; ಅ.27ಕ್ಕೆ ವಿಚಾರಣೆ ಮುಂದೂಡಿಕೆ