ಸಾಂದರ್ಭಿಕ ಚಿತ್ರ 
ದೇಶ

ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥನ ಮಗನ ವಿರುದ್ಧ ಚಾರ್ಜ್ ಶೀಟ್ ದಾಖಲಿಸಿದ ಎನ್ ಐಎ

ಉಗ್ರರಿಗೆ ಹಣಕಾಸು ನೆರವು ಆರೋಪದ ಮೇರೆಗೆ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಮುಖ್ಯಸ್ಥ ಸಯ್ಯದ್ ಸಲಾಹುದ್ದೀನ್ ಮಗ ಶಹೀದ್ ಯೂಸಫ್ ವಿರುದ್ಧ ರಾಷ್ಟ್ರೀಯ ತನಿಖಾ ದಳ ಚಾರ್ಜ್ ಶೀಟ್ ದಾಖಲಿಸಿದೆ.

ನವದೆಹಲಿ :  ಉಗ್ರರಿಗೆ ಹಣಕಾಸು ನೆರವು ಆರೋಪದ ಮೇರೆಗೆ ಹಿಜ್ಬುಲ್ ಮುಜಾಹಿದ್ದೀನ್  ಸಂಘಟನೆಯ ಮುಖ್ಯಸ್ಥ ಸಯ್ಯದ್ ಸಲಾಹುದ್ದೀನ್ ಮಗ ಶಹೀದ್ ಯೂಸಫ್ ವಿರುದ್ಧ ರಾಷ್ಟ್ರೀಯ ತನಿಖಾ ದಳ ಚಾರ್ಜ್ ಶೀಟ್ ದಾಖಲಿಸಿದೆ.

ಐಪಿಸಿಯ ಸೆಕ್ಷನ್ 120 ಬಿ ಮತ್ತು ಕಾನೂನುಬಾಹಿರ ಚಟುವಟಿಕೆ ನಿಯಂತ್ರಣ ಕಾಯ್ದೆ 1967ರ ಕಲಂ 13, 17, 18, 20, 21, 38, ಮತ್ತು 40 ರ ಪ್ರಕಾರ ಜಮ್ಮು -ಕಾಶ್ಮೀರದಲ್ಲಿ  ಹಣಕಾಸು ನೆರವು ಸ್ವೀಕಾರ, ಸಂಗ್ರಹ, ಮತ್ತಿತರ ಉಗ್ರ ಚಟುವಟಿಕೆ ಆರೋಪದ ಮೇರೆಗೆ ಚಾರ್ಜ್ ಶೀಟ್ ದಾಖಲಿಸಲಾಗಿದೆ.

ಯೂಸಪ್  ಬುದ್ ಗಾಮ್ ಜಿಲ್ಲೆಯ ಸೊಲಿ ಬಗ್ ನಿವಾಸಿಯಾಗಿದ್ದು, ಕೃಷಿ ಇಲಾಖೆಯ ಮಾಜಿ ನೌಕರನಾಗಿದ್ದಾನೆ. ರಾಷ್ಟ್ರೀಯ ತನಿಖಾ ದಳದಿಂದ ಆತನನ್ನು ಬಂಧಿಸಿದ ನಂತರ ಸೇವೆಯಿಂದ ವಜಾಗೊಳಿಸಲಾಗಿದೆ.

ಈ ಪ್ರಕರಣದಲ್ಲಿ ಶಹಿದ್ ಯೂಸಫ್ 7 ನೇ ಆರೋಪಿಯಾಗಿದ್ದಾನೆ.   ಈ ಪೈಕಿ ಐವರನ್ನು ಬಂಧಿಸಲಾಗಿದ್ದು,  ಉಳಿದ ಇಬ್ಬರು ತಲೆ ಮರೆಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!