ದೇಶ

ಪ್ರತಿಯೊಬ್ಬ ಅತ್ಯಾಚಾರಿಗಳನ್ನೂ ನೇಣಿಗೇರಿಸಬೇಕು - ನಿರ್ಭಯಾ ತಾಯಿ ಹೇಳಿಕೆ

Nagaraja AB

ನವದೆಹಲಿ :  ಮಕ್ಕಳ ಮೇಲಿನ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಸುಗ್ರೀವಾಜ್ಞೆಯನ್ನು ಕೇಂದ್ರಸರ್ಕಾರ ಜಾರಿಗೊಳಿಸುತ್ತಿರುವುದಕ್ಕೆ 2012ರಲ್ಲಿ ದೆಹಲಿಯಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ನಿರ್ಭಯಾ ಅವರ ತಾಯಿ ಆಶಾ ದೇವಿ ಪ್ರಶಂಸೆ ವ್ಯಕ್ತಪಡಿಸಿದ್ದು, ಪ್ರತಿಯೊಬ್ಬ ಅತ್ಯಾಚಾರಿಗಳನ್ನೂ ನೇಣಿಗೇರಿಸಬೇಕೆಂದು ಆಗ್ರಹಿಸಿದ್ದಾರೆ.

12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಅಪ್ರಾಪ್ತ ವಯಸ್ಸಿನ ಮಕ್ಕಳ ಮೇಲಿನ ಅತ್ಯಾಚಾರಿಗಳ ವಿರುದ್ಧ ಒಳ್ಳೆಯ ಕ್ರಮ. ಅತ್ಯಾಚಾರಕ್ಕಿಂತ ಮತ್ತೊಂದು  ಅಮಾನುಷ ಅಪರಾಧ ಇಲ್ಲ ಎಂದಿದ್ದಾರೆ.

ದೇಶದಲ್ಲಿ ಹೆಚ್ಚುತ್ತಿರುವ ಅಪ್ರಾಪ್ತ ವಯಸ್ಸಿನ ಮಕ್ಕಳ ಮೇಲಿನ ಅತ್ಯಾಚಾರ ತಡೆಗಟ್ಟಲು ಪೋಕ್ಸೋ ಕಾಯ್ದೆ ತಿದ್ದುಪಡಿಗೆ ಕೇಂದ್ರ ಸಚಿವ ಸಂಪುಟ ನಿನ್ನೆ ಒಪ್ಪಿಗೆ ನೀಡಿತ್ತು. 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ಅತ್ಯಾಚಾರ ನಡೆಸಿದವರಿಗೆ ಗಲ್ಲು ಶಿಕ್ಷೆ ವಿಧಿಸಲು ಈ ಕಾಯ್ದೆಯಲ್ಲಿ ಅವಕಾಶವಿದೆ.

ಇದನ್ನು ಸುಗ್ರೀವಾಜ್ಞೆ ಮೂಲಕ ಹೊರಡಿಸಿ, ಅದನ್ನು ರಾಷ್ಟ್ರಪತಿಗಳ ಅಂಕಿತಕ್ಕೆ ಕಳುಹಿಸಿತ್ತು.
ಕೇಂದ್ರ ಸರ್ಕಾರದ ಈ ನಿರ್ಧಾರಕ್ಕೆ ಇದೀಗ ರಾಷ್ಟ್ರಪತಿ ಕೋವಿಂದ್ ಅವರು ಅಂಕಿತ ಹಾಕಿದ್ದು, ಶೀಘ್ರದಲ್ಲಿಯೇ ಕಾರ್ಯರೂಪಕ್ಕೆ ಬರಲಿದೆ

SCROLL FOR NEXT