ಸಂಗ್ರಹ ಚಿತ್ರ 
ದೇಶ

'ಕತುವಾ ಬಾಲಕಿ ಮೇಲೆ ಅತ್ಯಾಚಾರ ನಡೆದಿಲ್ಲ': ವರದಿ ತಳ್ಳಿಹಾಕಿದ ಪೊಲೀಸರು

ಜಮ್ಮುವಿನ ಕತುವಾ ಜಿಲ್ಲೆಯಲ್ಲಿ 8 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿಲ್ಲ ಎಂಬ ಸಾಮಾಜಿಕ ಜಾಲತಾಣಗಳ ವರದಿಗಳನ್ನು ಶನಿವಾರ ಪೊಲೀಸರು ತಳ್ಳಿಹಾಕಿದ್ದಾರೆ...

ನವದೆಹಲಿ: ಜಮ್ಮುವಿನ ಕತುವಾ ಜಿಲ್ಲೆಯಲ್ಲಿ 8 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿಲ್ಲ ಎಂಬ ಸಾಮಾಜಿಕ ಜಾಲತಾಣಗಳ ವರದಿಗಳನ್ನು ಶನಿವಾರ ಪೊಲೀಸರು ತಳ್ಳಿಹಾಕಿದ್ದಾರೆ. 
ಕತುವಾ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡೀ ದೇಶದಾದ್ಯಂತ ಚರ್ಚೆ ಹಾಗೂ ಆಕ್ರೋಶಗಳು ವ್ಯಕ್ತವಾಗುತ್ತಿರುವ ನಡುವೆಯೇ ಸಾಮಾಜಿಕ ಜಾಲತಾಣಗಳಲ್ಲಿ ವರದಿಗಳು ಹರಿದಾಡಲು ಆರಂಭಿಸಿತ್ತು. ಕತುವಾ ಬಾಲಕಿ ಮೇಲೆ ಅತ್ಯಾಚಾರ ನಡೆದಿಲ್ಲ ಎಂದು ಹೇಳಲಾಗುತ್ತಿತ್ತು. 
ವರದಿಗಳ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅಧಿಕಾರಿಗಳು, ಈ ವರದಿಗಳು ಸತ್ಯಕ್ಕೆ ದೂರವಾದದ್ದು, ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ ಜಮ್ಮು ಮತ್ತು ಕಾಶ್ಮೀರದ ಅಪರಾಧ ವಿಭಾಗದ ಪೊಲೀಸರು ಹೇಳಿದ್ದಾರೆ. 
ಅರಣ್ಯ ಪ್ರದೇಶಕ್ಕೆ ಕುದುರೆಗಳನ್ನು ಕರೆದುಕೊಂಡು ಹೋಗಿದ್ದ 8 ವರ್ಷದ ಬಾಲಕಿ ಆಸೀಫಾ ಜ.10 ರಂದು ನಾಪತ್ತೆಯಾಗಿದ್ದಳು. ಬಾಲಕಿಯನ್ನು ಅಪಹರಿಸಿದ್ದ ಕಾಮುಕರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಬರ್ಬರವಾಗಿ ಹತ್ಯೆ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿ, ಮುಂಬೈನಲ್ಲಿ ಬೃಹತ್ ಪ್ರತಿಭಟನೆ; 700 ಮಂದಿ ವಶಕ್ಕೆ

FlyDubai ಘಟನೆ ಹಿಂದೆ ಯಾವುದೇ ಶಕ್ತಿಯ ಕೈವಾಡವಿದ್ದರೂ ಡೋಂಟ್ ಕೇರ್; 'ಭಾರಿ ಬೆಲೆ' ತೆರಬೇಕಾಗುತ್ತೆ- ಇಸ್ರೇಲ್ ಪ್ರಧಾನಿ ನೆತನ್ಯಾಹು ಎಚ್ಚರಿಕೆ

ಬಿಹಾರ ಪ್ರವಾಹ: ವಾಯುಪಡೆಯ ಹೆಲಿಕಾಪ್ಟರ್‌ನಿಂದ ಪರಿಹಾರ ಸಾಮಗ್ರಿಯ ಪ್ಯಾಕೆಟ್ ಬಿದ್ದು ವೃದ್ಧ ಸಾವು!

Asian Games 2026: 44 ವರ್ಷಗಳ ಬರ ನೀಗಿಸಿದ ಮಹಿಳಾ ಪಡೆ; ಚೀನಾ ಮಣಿಸಿ ಚಿನ್ನ ಗೆದ್ದ ಭಾರತ!

CJP ಪ್ರತಿಭಟನೆಗೆ ಕೈಜೋಡಿಸಿದ ನಸೀರುದ್ದೀನ್ ಶಾ; ನಟನನ್ನು ಅಪ್ಪಿಕೊಂಡು ಕಣ್ಣೀರಿಟ್ಟ ಅಭಿಜೀತ್ ದೀಪ್ಕೆ; Video!