ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ 
ದೇಶ

ಅತ್ಯಾಚಾರಿಗಳಿಗೆ ಗಲ್ಲುಶಿಕ್ಷೆ: ಐತಿಹಾಸಿಕ ನಿರ್ಧಾರ ಎಂದ ಗೃಹ ಸಚಿವ ರಾಜನಾಥ್ ಸಿಂಗ್

ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ಕುರಿತು ಕೇಂದ್ರ ಸರ್ಕಾರದ ತೆಗೆದುಕೊಂಡ ನಿರ್ಧಾರ ಐತಿಹಾಸಿಕ ನಿರ್ಧಾರವೆಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಭಾನುವಾರ ಹೇಳಿದ್ದಾರೆ...

ನವದೆಹಲಿ: ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ಕುರಿತು ಕೇಂದ್ರ ಸರ್ಕಾರದ ತೆಗೆದುಕೊಂಡ ನಿರ್ಧಾರ ಐತಿಹಾಸಿಕ ನಿರ್ಧಾರವೆಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಭಾನುವಾರ ಹೇಳಿದ್ದಾರೆ. 
ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಸರ್ಕಾರದ ನಿರ್ಧಾರ ಐತಿಹಾಸಿಕ ನಿರ್ಧಾರನಾಗಿದೆ. ಕ್ರೂರ ಅಪರಾಧ ಕೃತ್ಯವೆಸಗುವವರಿಗೆ ಇಂತಹ ಶಿಕ್ಷೆಯ ಅಗತ್ಯವಿದೆ ಎಂದು ಹೇಳಿದ್ದಾರೆ. ಅಲ್ಲದೆ, ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ. 
ನಿನ್ನಯಷ್ಟೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆಯೊಂದನ್ನು ನಡೆಸಿತ್ತು. ಸಭೆಯಲ್ಲಿ ಅತ್ಯಾಚಾರಿಗಳ ಕುರಿತು ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿತ್ತು. 
12 ವರ್ಷದೊಳಗಿನ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಎಸಗುವವರಿಗೆ ಗಲ್ಲು ಶಿಕ್ಷೆ ವಿಧಿಸುವ ಕಾನೂನು ಜಾರಿಗೆ ಕೇಂದ್ರ ಸರ್ಕಾರ ನಿನ್ನೆಯಷ್ಟೇ ನಿರ್ಧಾರ ಕೈಗೊಂಡಿತ್ತು. ಅಲ್ಲದೆ, ಇತರೆ ಅತ್ಯಾಚಾರ ಪ್ರಕರಣಗಳ ದೋಷಿಗಳಿಗೂ ಶಿಕ್ಷೆಯ ಪ್ರಮಾಣ ಹೆಚ್ಚಿಸಲು ಶೀಘ್ರವೇ ಕಾನೂನು ಜಾರಿ ಉದ್ದೇಶದಿಂದ ಸುಗ್ರೀವಾಜ್ಞೆ ಹೊರಡಿಸುವುದಾಗಿ ತಿಳಿಸಿತ್ತು. ಇದೀಗ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಒಪ್ಪಿಗೆ ಸೂಚಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!