ನವದೆಹಲಿ: ಸಿಜೆಐ ದೀಪಕ್ ಮಿಶ್ರಾ ಮಹಾಭಿಯೋಗಕ್ಕೆ ಸಂಬಂಧಿಸಿದಂತೆ ವೆಂಕಯ್ಯ ನಾಯ್ಡು ಆದೇಶವನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಲು ಕಾಂಗ್ರೆಸ್ ನಿರ್ಧರಿಸಿದೆ.
ದೀಪಕ್ ಮಿಶ್ರಾ ಅವರ ಮಹಾಭಿಯೋಗಕ್ಕೆ ಕಾಂಗ್ರೆಸ್ ಸಲ್ಲಿಸಿದ್ದ ನೋಟೀಸ್ ನ್ನು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ತಿರಸ್ಕರಿಸಿದ್ದರು. ಈ ಬಗ್ಗೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಕಪಿಲ್ ಸಿಬಲ್, ಸಿಜೆಐ ವಿರುದ್ಧ ಕೇಳಿಬಂದಿರುವ ಆರೋಪ ಅತ್ಯಂತ ಗಂಭೀರವಾದದ್ದು. ಆದರೆ ಸರ್ಕಾರ ಈ ನಿಟ್ಟಿನಲ್ಲಿ ತನಿಖೆ ನಡೆಸಲು ಉತ್ಸಾಹ ತೋರುತ್ತಿಲ್ಲ.
ಖಂಡಿತವಾಗಿಯೂ ನಾವು ಈ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಿದ್ದೇವೆ , ಸುಪ್ರೀಂ ಕೋರ್ಟ್ ಏನು ಹೇಳುತ್ತದೆಯೋ ಅದನ್ನು ನಾವು ಪಾಲಿಸುತ್ತೇವೆ ಎಂದು ಸಿಬಲ್ ಹೇಳಿದ್ದಾರೆ. ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯ ಬಗ್ಗೆ ಸಾಂವಿಧಾನಿಕ ಹಾಗೂ ಕಾನೂನು ತಜ್ಞರ ಅಭಿಪ್ರಾಯ ಪಡೆದಿದ್ದ ವೆಂಕಯ್ಯ ನಾಯ್ಡು ಇಂಪೀಚ್ ಮೆಂಟ್ ಅರ್ಜಿಯನ್ನು ತಿರಸ್ಕರಿಸಿದ್ದರು.