ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಚಲಿಸುತ್ತಿದ್ದ ರೈಲಿನಲ್ಲಿ 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ, ಆರ್ ಕೆ ನಗರ ಮಾಜಿ ಬಿಜೆಪಿ ಅಭ್ಯರ್ಥಿ ಬಂಧನ

ಚಲಿಸುತ್ತಿದ್ದ ರೈಲಿನಲ್ಲಿ 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ತಮಿಳುನಾಡು ಬಿಜೆಪಿ ಮುಖಂಡನನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ.

ಸಾಂದರ್ಭಿಕ ಚಿತ್ರ
Srinivasa Murthy VN
Updated On : 23 Apr 2018, 9:26 am
ಚೆನ್ನೈ: ಚಲಿಸುತ್ತಿದ್ದ ರೈಲಿನಲ್ಲಿ 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ತಮಿಳುನಾಡು ಬಿಜೆಪಿ ಮುಖಂಡನನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ.
ಚೆನ್ನೈ ಮೂಲದ ವಕೀಲ ಮತ್ತು ಬಿಜೆಪಿ ಮುಖಂಡ ಕೆಪಿ ಪ್ರೇಮ್ ಅನಂತ್ ಎಂಬಾತನನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದು, ಪ್ರಸ್ತುತ ಪೋಕ್ಸೋ ಕಾಯ್ದೆಯಡಿಯಲ್ಲಿ ಆರೋಪಿ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ.
ಮೂಲಗಳ ಪ್ರಕಾರ ಕೇರಳ ಮೂಲದ ಕುಟುಂಬವೊಂದು ತಿರುವನಂತಪುರಂನಿಂದ ಚೆನ್ನೈಗೆ ರೈಲಿನಲ್ಲಿ ಪ್ರಯಾಣಿಸುತ್ತಿತ್ತು. ರೈಲಿನ ಮಧ್ಯ ಸೀಟಿನಲ್ಲಿ 9 ವರ್ಷದ ಬಾಲಕಿ ಕೂಡ ಇದ್ದರು. ಶನಿವಾರ ರಾತ್ರಿ ರೈಲು ಸೇಲಂ ಮತ್ತು ಈರೋಡ್ ನಡುವೆ ಸಂಚರಿಸುತ್ತಿದ್ದಾಗ ವಕೀಲ ಬಾಲಕಿಯ ಎದೆ ಭಾಗವನ್ನು ಅಶ್ಲೀಲವಾಗಿ ಮುಟ್ಟಿ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ವೇಳೆ ಬಾಲಕಿ ಜೋರಾಗಿ ಕಿರುಚಿಕೊಂಡಿದ್ದು, ಕೂಡಲೇ ಎಚ್ಚೆತ್ತ ಪೊಷಕರಿಗೆ ವಿಚಾರ ತಿಳಿಸಿದ್ದಾಳೆ. 

Advertisement

Advertisement

ಅಲ್ಲಿದ್ದ ಸಹ ಪ್ರಯಾಣಿಕರು ಆರೋಪಿಯನ್ನು ಹಿಡಿದು ರೈಲ್ವೇ ಪೊಲೀಸರ ವಶಕ್ಕೆ ನೀಡಿದ್ದಾರೆ. ಮೂಲಗಳ ಪ್ರಕಾರ ಬಂಧಿತ ಆರೋಪಿ ಬಿಜೆಪಿ ಮುಖಂಡನಾಗಿದ್ದು, ಈ ಹಿಂದೆ ಜಯಲಲಿತಾ ಅವರ ಆರ್ ಕೆನಗರ ಕ್ಷೇತ್ರದಿಂದ 2006ರಲ್ಲಿ ಅವರ ಪ್ರತಿಸ್ಪರ್ಧಿಯಾಗಿ ಬಿಜೆಪಿ ಪರವಾಗಿ ಸ್ಪರ್ಧಿಸಿದ್ದನಂತೆ. 
ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಮೂಲಕ ಅಪ್ರಾಪ್ತರ ಮೇಲಿನ ಅತ್ಯಾಚಾರ ಪ್ರಕರಣಗಳಿಗೆ ಗರಿಷ್ಟ ಪ್ರಮಾಣದ ಶಿಕ್ಷೆ ನೀಡಲು ನಿರ್ಧರಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement