ಸಂಗ್ರಹ ಚಿತ್ರ 
ದೇಶ

ನಗದು ಕೊರತೆ: 3 ಲಕ್ಷ ಕೋಟಿಗೂ ಅಧಿಕ ಹಣ ಚಲಾವಣೆಯಾಗದೇ ವಿಚಾರಣೆಯಲ್ಲಿ ಸ್ಥಗಿತ!

ನೋಟು ನಿಷೇಧ ಬಳಿಕ ದೇಶದಲ್ಲಿ ಎರಡನೇ ಬಾರಿಗೆ ನಗದು ಕೊರತೆ ಮುಂದುವರೆದಿರುವಂತೆಯೇ ಸುಮಾರು 3 ಲಕ್ಷ ಕೋಟಿಗೂ ಅಧಿಕ ಹಣ ಚಲಾವಣೆಯಾಗದೇ ಸ್ಥಗಿತವಾಗಿದೆ ಎಂಬ ಮಹತ್ತರ ಮಾಹಿತಿ ಇದೀಗ ಲಭ್ಯವಾಗಿದೆ.

ನವದೆಹಲಿ: ನೋಟು ನಿಷೇಧ ಬಳಿಕ ದೇಶದಲ್ಲಿ ಎರಡನೇ ಬಾರಿಗೆ ನಗದು ಕೊರತೆ ಮುಂದುವರೆದಿರುವಂತೆಯೇ ಸುಮಾರು 3 ಲಕ್ಷ ಕೋಟಿಗೂ ಅಧಿಕ ಹಣ ಚಲಾವಣೆಯಾಗದೇ ಸ್ಥಗಿತವಾಗಿದೆ ಎಂಬ ಮಹತ್ತರ ಮಾಹಿತಿ ಇದೀಗ ಲಭ್ಯವಾಗಿದೆ.
ಮೂಲಗಳ ಪ್ರಕಾರ ತೆರಿಗೆ ಸಂಬಂಧಿತ ವಿವಿಧ ಪ್ರಕರಣಗಳಲ್ಲಿ ದೊರೆತ ಸುಮಾರು 3.2ಲಕ್ಷ ಕೋಟಿ ಹಣ ಚಲಾವಣೆಯಾಗದೇ ಸ್ಥಗಿತವಾಗಿದೆ. ತೆರಿಗೆ ಸಂಬಂಧಿತ ಪ್ರಕರಣಗಳ ವಿಚಾರಣೆಗಳು ನ್ಯಾಯಾಲಯದಲ್ಲಿದ್ದು, ಈ ಪ್ರಕರಣಗಳು ಇತ್ಯರ್ಥವಾಗುವವರೆಗೂ ಈ ಅಪಾರ ಪ್ರಮಾಣದ ನಗದು ಬಳಕೆಗೆ ಕಾನೂನು ತೊಡಕು ಉಂಟಾಗುತ್ತಿದೆ. ಈ ಪೈಕಿ ಸುಮಾರು 2.40 ಲಕ್ಷ ಕೋಟಿ ನೇರ ತೆರಿಗೆಗೆ ಸಂಬಂಧಿಸಿದ್ದಾಗಿದ್ದು, ಉಳಿದ 1.18 ಲಕ್ಷ ಕೋಟಿ ಹಣ ಪರೋಕ್ಷ ತೆರಿಗೆ ವ್ಯಾಪ್ತಿಯ ಹಣವಾಗಿದೆ ಎಂದು ತಿಳಿದುಬಂದಿದೆ. 
ಅಂತೆಯೇ ಕಳೆದ 5 ರಿಂದ 10 ವರ್ಷಗಳಲ್ಲಿ ನೇರ ತೆರಿಗೆ ಸಂಬಂಧಿತ ಸುಮಾರು 33, 554 ಪ್ರಕರಣಗಳ ಬಾಕಿ ಉಳಿದಿದ್ದು, ಕಳೆದ 10 ವರ್ಷಗಳಲ್ಲಿ  4,230 ಹಳೆಯ ಪ್ರಕರಣಗಳು ಇನ್ನೂ ವಿಚಾರಣೆಯ ಹಂತದಲ್ಲಿವೆ. ಒಟ್ಟಾರೆ ತೆರಿಗೆ ಪಾವತಿ ಒಟ್ಟು ಪ್ರಕರಣಗಳ ಪೈಕಿ ಶೇ.85ಕ್ಕೂ ಅಧಿಕ ಪ್ರಮಾಣದ ಪ್ರಕರಣಗಳು ಇನ್ನೂ ವಿಚಾರಣೆ ಹಂತದಲ್ಲಿದೆ. 
ಈ ಬಗ್ಗೆ ಮಾಹಿತಿ ನೀಡಿರುವ ತೆರಿಗೆ ಅಧಿಕಾರಿಗಳು ತೆರಿಗೆ ಬಾಕಿ ಉಳಿಕೆ ಸಂಬಂಧ ಸಣ್ಣ ಪ್ರಮಾಣದ ಬಾಕಿಯನ್ನು ಮಾತ್ರ ಕಲೆ ಹಾಕಲು ಸಾಧ್ಯ. ಉಳಿಕೆಯ ದೊಡ್ಡ ಮೊತ್ತದ ತೆರಿಗೆ ಹಣವನ್ನು ಸಂಗ್ರಹ ಮಾಡಲು ಕಷ್ಟವಾಗುತ್ತಿದೆ. ತೆರಿಗೆ ಬಾಕಿ ಪಾವತಿಗೆ ಕೇಂದ್ರ ಸರ್ಕಾರ ಅಧಿಕಾರಿಗಳಿಗೆ ಗುರಿ ನಿಗದಿ ಪಡಿಸುತ್ತಿದ್ದು, ಆದರೆ ತೆರಿಗೆ ಬಾಕಿ ವಸೂಲಿ ವಿವಿಧ ಕಾರಣಗಳಿಂದಾಗಿ ಕಷ್ಟವಾಗುತ್ತಿದೆ. ಆದರೂ ಅಧಿಕಾರಿಗಳು ತೆರಿಗೆದಾರರ ಕುರಿತಂತೆ ಸೂಕ್ಷ್ಮವಾಗಿ ಗಮನ ಹರಿಸುತ್ತಿದೆ ಎಂದು ಹೇಳಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Waqf Amendment Act: ಕೆಲವೊಂದು ಅಂಶಗಳಿಗೆ ತಡೆ ನೀಡಿ ಸುಪ್ರೀಂ ಕೋರ್ಟ್ 'ಮಧ್ಯಂತರ ಆದೇಶ' ಪ್ರಕಟ

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆಗೆ ವಿರೋಧ: PIL ವಜಾಗೊಳಿಸಿದ ಹೈಕೋರ್ಟ್; ಪ್ರತಾಪ್ ಸಿಂಹಗೆ ಭಾರಿ ಹಿನ್ನಡೆ!

ಭಾರತ vs ಪಾಕ್ ಪಂದ್ಯದ ವೇಳೆ ₹1.5 ಲಕ್ಷ ಕೋಟಿ ಜೂಜಾಟ; ಹ್ಯಾಂಡ್‌ಶೇಕ್ ನಿರಾಕರಣೆ ಒಂದು ಪ್ರಹಸನ; ಸಂಜಯ್ ರಾವುತ್

ಬೆಂಗಳೂರು: ವೇಶ್ಯಾವಾಟಿಕೆಗೆ ತಳ್ಳಲು ಮಹಿಳೆಯರ ಅನೈತಿಕ ಸಾಗಣೆಯಲ್ಲಿ ಗಣನೀಯ ಏರಿಕೆ!

Asia Cup 2025: ಭಾರತ vs ಪಾಕಿಸ್ತಾನ ಪಂದ್ಯ ಮತ್ತೆ ಯಾವಾಗ? ಇಲ್ಲಿದೆ ಲೆಕ್ಕಾಚಾರ...

SCROLL FOR NEXT