ಸಂಗ್ರಹ ಚಿತ್ರ 
ದೇಶ

ಅತ್ಯಾಚಾರ ಪ್ರಕರಣ: ಅಸಾರಾಂ ಬಾಪು, ಇತರ ಆರೋಪಿಗಳು ದೋಷಿಗಳು, ಜೋಧ್‏ಪುರ ನ್ಯಾಯಾಲಯ ತೀರ್ಪು

ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪು ದೋಷಿ ಎಂದು ಜೋಧ್‏ಪುರ ನ್ಯಾಯಾಲಯ...

ಜೋಧ್ ಪುರ: ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪು ದೋಷಿ ಎಂದು ಜೋಧ್‏ಪುರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.
ಜೋಧ್‏ಪುರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನ್ಯಾಯಾಲಯದ ನ್ಯಾಯಾಧೀಶರಾದ ಮಧುಸೂದನ್ ಶರ್ಮಾ ಇಂದು ತೀರ್ಪು ನೀಡಿದ್ದು, ಸ್ವಯಂ ಘೋಷಿತ ದೇವ ಮಾನವ ಅಸಾರಾಂ ಬಾಪು ಮತ್ತು ಪ್ರಕರಣದ ಇತರೆ ಎಲ್ಲ ಆರೋಪಿಗಳು ದೋಷಿ ಎಂದು ತೀರ್ಪು ನೀಡಿದ್ದಾರೆ.
ಭದ್ರತಾ ಕಾರಣಗಳಿಂದಾಗಿ ಇಂದು ಅಸಾರಾಂ ಬಾಪು ಇರುವ ಜೈಲಿನಲ್ಲೇ ನ್ಯಾಯಾಧೀಶರು ತಮ್ಮ ತೀರ್ಪು ಪ್ರಕಟಿಸಿದರು. 
ಆಶ್ರಮದಲ್ಲಿ ಅಸಾರಾಂ ಬಾಪು ತನ್ನ ಮೇಲೆ ಅತ್ಯಾಚಾರ ಎಸಗಿರುವುದಾಗಿ ಆರೋಪಿ 16 ವರ್ಷದ ವಿದ್ಯಾರ್ಥಿನಿ ಸ್ವಯಂ ಘೋಷಿತ ದೇವಮಾನವನ ವಿರುದ್ಧ ಕೇಸ್ ದಾಖಲಿಸಿದ್ದಳು. ರಾಜಸ್ಥಾನ ಆಶ್ರಮದಲ್ಲಿ ವಾಸಿಸುತ್ತಿದ್ದ ಬಾಲಕಿಯನ್ನು ಸ್ವಯಂಘೋಷಿತ ದೇವಮಾನವ ನಿರಂತರವಾಗಿ ಲೈಂಗಿಕ ದೌರ್ಜನ್ಯಕ್ಕೆ ಬಳಸಿಕೊಂಡಿದ್ದ. ಈ ಪ್ರಕರಣ ಸಂಬಂಧ ಜೋಧಪುರ ಪೊಲೀಸರು ಅಸಾರಾಂನನ್ನು 2013ರ ಆಗಸ್ಟ್ 31ರಂದು ಬಂಧಿಸಿದ್ದರು. , ಅಂದಿನಿಂದಲೂ ಅವರು ಜೈಲಿನಲ್ಲಿದ್ದಾರೆ.
ಇನ್ನು ಪ್ರಕರಣ ಸಂಬಂಧ 9 ಮಂದಿ ಸಾಕ್ಷಿವ ಹೇಳಿದ್ದರು. ಈ ಪೈಕಿ 3 ಮಂದಿ ಅಸರಾಂಬಾಪು ಅನುಯಾಯಿಗಳ ದಾಳಿಯಲ್ಲಿ ಸಾವನ್ನಪ್ಪಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT