ನ್ಯಾಯಾಂಗವನ್ನು ಕೇಂದ್ರ ಸರ್ಕಾರ ದೆಹಲಿ ಸರ್ಕಾರದಂತೆಯೇ ನಡೆಸಿಕೊಳ್ಳುತ್ತಿದೆ: ಕೇಜ್ರಿವಾಲ್
ಹಲವು ದಿನಗಳ ನಂತರ ಪ್ರಧಾನಿ ನರೇಂದ್ರ ಮೋದಿ ಟೀಕಾಪ್ರಹಾರ ಮಾಡಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಕೇಂದ್ರ ಸರ್ಕಾರ ನ್ಯಾಯಂಗವನ್ನೂ ದೆಹಲಿ ಸರ್ಕಾರದಂತೆಯೇ ನಡೆಸಿಕೊಳ್ಳುತ್ತಿದೆ
ನವದೆಹಲಿ: ಹಲವು ದಿನಗಳ ನಂತರ ಪ್ರಧಾನಿ ನರೇಂದ್ರ ಮೋದಿ ಟೀಕಾಪ್ರಹಾರ ಮಾಡಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಕೇಂದ್ರ ಸರ್ಕಾರ ನ್ಯಾಯಂಗವನ್ನೂ ದೆಹಲಿ ಸರ್ಕಾರದಂತೆಯೇ ನಡೆಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.
ಹೈಕೋರ್ಟ್ ನ್ಯಾಯಾಧೀಶ ಕೆಎಂ ಜೋಸೆಫ್ ಅವರನ್ನು ಸುಪ್ರೀಂ ಕೋರ್ಟ್ ನ ನ್ಯಾಯಾಧೀಶರನ್ನಾಗಿ ನೇಮಕ ಮಾಡುವ ಶಿಫಾರಸ್ಸನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದ ಬೆಳವಣಿಗೆ ಬೆನ್ನಲ್ಲೇ ಕೇಜ್ರಿವಾಲ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ದೆಹಲಿ ಸರ್ಕಾರವನ್ನು ನಡೆಸಿಕೊಂಡ ರೀತಿಯಲ್ಲೇ ನ್ಯಾಯಾಂಗವನ್ನೂ ನಡೆಸಿಕೊಳ್ಳಲಾಗುತ್ತಿದೆ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.
ಈ ಹಿಂದೆಯೂ ಕೇಜ್ರಿವಾಲ್ ಕೇಂದ್ರ ಸರ್ಕಾರದ ವಿರುದ್ಧ ದೆಹಲಿ ಸರ್ಕಾರದ ಕಾರ್ಯನಿರ್ವಹಣೆಗೆ ಅಡ್ಡಿ ಉಂಟುಮಾಡುತ್ತಿರುವ ಆರೋಪ ಮಾಡಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.