India, Pakistan 
ದೇಶ

ಇದೇ ಮೊದಲ ಬಾರಿಗೆ ವಿವಿಧ ರಾಷ್ಟ್ರಗಳ ಸೇನಾ ಸಮರಾಭ್ಯಾಸದಲ್ಲಿ ಭಾರತ-ಪಾಕಿಸ್ತಾನ!

ರಾಷ್ಟ್ರೀಯವಾಗಿ, ಧಾರ್ಮಿಕವಾಗಿ, ಸಾಂಪ್ರದಾಯಿಕವಾಗಿ ಬದ್ಧ ವೈರಿ ರಾಷ್ಟ್ರಗಳಾಗಿರುವ ಪಾಕಿಸ್ತಾನ ಮತ್ತು ಭಾರತ ಜತೆ ಇದೇ ಮೊದಲ ಬಾರಿಗೆ ವಿವಿಧ ರಾಷ್ಟ್ರಗಳ ಸೇನಾ ಸಮರಾಭ್ಯಾಸದಲ್ಲಿ ಪಾಲ್ಗೊಳ್ಳಲಿವೆ...

ರಾಷ್ಟ್ರೀಯವಾಗಿ, ಧಾರ್ಮಿಕವಾಗಿ, ಸಾಂಪ್ರದಾಯಿಕವಾಗಿ ಬದ್ಧ ವೈರಿ ರಾಷ್ಟ್ರಗಳಾಗಿರುವ ಪಾಕಿಸ್ತಾನ ಮತ್ತು ಭಾರತ ಜತೆ ಇದೇ ಮೊದಲ ಬಾರಿಗೆ ವಿವಿಧ ರಾಷ್ಟ್ರಗಳ ಸೇನಾ ಸಮರಾಭ್ಯಾಸದಲ್ಲಿ ಪಾಲ್ಗೊಳ್ಳಲಿವೆ. 
ರಷ್ಯಾದಲ್ಲಿ ಸೆಪ್ಟೆಂಬರ್ ನಲ್ಲಿ ವಿವಿಧ ರಾಷ್ಟ್ರಗಳ ಸೇನಾ ಸಮರಾಭ್ಯಾಸ ನಡೆಯಲಿದೆ. ಶಾಂಘೈ ಕಾರ್ಪೋರೇಷನ್ ಈ ಸಮರಾಭ್ಯಾಸವನ್ನು ಆಯೋಜಿಸುತ್ತಿದೆ. ಚೀನಾ ಸೇರಿದಂತೆ ಹಲವು ರಾಷ್ಟ್ರಗಳು ಈ ಸಮರಾಭ್ಯಾಸದಲ್ಲಿ ಪಾಲ್ಗೊಳ್ಳಲಿವೆ. 
ರಷ್ಯಾದ ಕಣಿವೆ ಪ್ರದೇಶ ಉರಾಲ್ ಬೆಟ್ಟ ಶ್ರೇಣಿಯಲ್ಲಿ ಸೆಪ್ಟೆಂಬರ್ ನಲ್ಲಿ ಭಯೋತ್ಪಾದನ ವಿರೋಧಿ ಸಮರಭ್ಯಾಸ ನಡೆಯಲಿದ್ದು ಭಾರತ, ರಷ್ಯಾ, ಚೀನಾ, ಪಾಕಿಸ್ತಾನ, ಕಜಕಿಸ್ತಾನ, ಕಿರ್ಗಿಸ್ತಾನ, ಉಜ್ಬೇಕಿಸ್ತಾನ, ತಜಕಿಸ್ತಾನ ರಾಷ್ಟ್ರಗಳು ಈ ಸಮರಾಭ್ಯಾಸದಲ್ಲಿ ಪಾಲ್ಗೋಳ್ಳಲಿವೆ. 
ಕಳೆದ ವಾರ ಬೀಜಿಂಗ್ ನಲ್ಲಿ ನಡೆದ ಎಸ್ಸಿಒ ರಕ್ಷಣಾ ಸಚಿವ ಸಭೆಯಲ್ಲಿ ಭಾಗಿಯಾಗಿದ್ದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ಸಮರಾಭ್ಯಾಸದಲ್ಲಿ ಭಾರತ ಭಾಗವಹಿಸುತ್ತಿರುವುದಾಗಿ ಸ್ಫಷ್ಟಪಡಿಸಿದ್ದರು.
ಡೋಕ್ಲಾಂ ವಿವಾದ ನಂತರ ಭಾರತ ಹಾಗೂ ಚೀನಾ ನಡುವೆ ದ್ವಿಪಕ್ಷೀಯ ಬಾಂಧವ್ಯ ಅಳಸಿತ್ತು. ಇದೀಗ ಸೇನಾ ಸಮಾರಾಭ್ಯಸದಿಂದ ಚೀನಾ ಮತ್ತು ಭಾರತ ನಡುವೆ ಮತ್ತೇ ಉತ್ತಮ ಬಾಂಧವ್ಯ ವೃದ್ಧಿಯಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!

ಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿ: 'ಸ್ಟಿಂಗ್ ಆಪರೇಷನ್' ಕುರಿತು ಸಿಎಂ DKS ಎಚ್ಚರಿಕೆ ಕರೆಗೆ ಸಚಿವರಿಂದ ಬೆಂಬಲ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್‌; ಇಬ್ಬರಿಗೂ ಕೋರ್ಟ್ ಸಮನ್ಸ್

ಉತ್ತರ ಪ್ರದೇಶ ಚುನಾವಣೆಗೂ ಮುನ್ನ ಅಖಿಲೇಶ್ ಯಾದವ್'ಗೆ ಬಿಗ್ ಶಾಕ್; BJP ಸೇರಲಿದ್ದಾರೆ SPಯ ಮೂವರು ಶಾಸಕರು!