ಸೋನಿಯಾ ಗಾಂಧಿ 
ದೇಶ

ದೇಶದ ಯುವಕರಿಗೆ, ರೈತರಿಗೆ ಪ್ರಧಾನಿ ಮೋದಿ ಮೋಸ ಮಾಡುತ್ತಿದ್ದಾರೆ: ಸೋನಿಯಾ ಗಾಂಧಿ

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಆಡಳಿತಾರೂಢ ಎನ್'ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿಯವರು, ಮೋದಿಯವರ ಆಡಳಿತದಲ್ಲಿ ಪ್ರತೀಯೊಂದು ವಿಭಾಗದ ಜನರೂ ಸಂಕಷ್ಟದಲ್ಲಿ...

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಆಡಳಿತಾರೂಢ ಎನ್'ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿಯವರು, ಮೋದಿಯವರ ಆಡಳಿತದಲ್ಲಿ ಪ್ರತೀಯೊಂದು ವಿಭಾಗದ ಜನರೂ ಸಂಕಷ್ಟದಲ್ಲಿ ಜೀವನ ನಡೆಸುವಂತಾಗಿದೆ ಎಂದು ಭಾನುವಾರ ಹೇಳಿದ್ದಾರೆ. 
ದೆಹಲಿಯಲ್ಲಿ ನಡೆಸುತ್ತಿರುವ ಜನಾಕ್ರೋಶ ರ್ಯಾಲಿಯಲ್ಲಿ ಮಾತನಾಡಿರುವ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಯುವಕರು ಹಾಗೂ ರೈತರಿಗೆ ಮೋಸ ಮಾಡುತ್ತಿದ್ದಾರೆಂದು ಆರೋಪಿಸಿದ್ದಾರೆ. 
ಅತ್ಯಾಚಾರಿಗಳನ್ನು ರಕ್ಷಣೆ ಮಾಡಲಾಗುತ್ತಿದೆ. ನಿರುದ್ಯೋಗ ಸಮಸ್ಯೆಗಳು ಹೆಚ್ಚಾಗತೊಡಗಿವೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದರೆ, ಬಿಜೆಪಿ ಮಾತ್ರ ಸಮಸ್ಯೆಗಳಿಗೆ ಏನನ್ನೂ ಮಾಡುತ್ತಿಲ್ಲ. 
2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಮೋದಿ ಹೇಳಿದ್ದರು. ಆದರೆ, ಈ ಬಗ್ಗೆ ಏನನ್ನೂ ಮಾಡಿಲ್ಲ. ಈಗಲೂ ಯುವಕರು ಉದ್ಯೋಗಕ್ಕಾಗಿ ಸಂಕಷ್ಟ ಪಡುತ್ತಿದ್ದಾರೆ. ಮೋದಿ ದ್ರೋಹ ಮಾಡಿದ್ದಾರೆಂದು ಅವರಿಗೆ ಗೊತ್ತಿದೆ. ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿದೆ. ಪುಟ್ಟ ಹೆಣ್ಣುಮಕ್ಕಳನ್ನೂ ಬಿಡುತ್ತಿಲ್ಲ. ಆಡಳಿತಾರೂಢ ಸರ್ಕಾರ ಅಪರಾಧಿಗಳಿಗೆ ರಕ್ಷಣೆ ನೀಡುತ್ತಿದೆ. 
ಬಿಜೆಪಿ ಆಡಳಿತದ ವಿರುದ್ಧ ಜನರು ಒಗ್ಗೂಡಬೇಕಿದೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರ ನಾಯಕತ್ವದಲ್ಲಿ ದೇಶದಲ್ಲಿ ಅಂಟಿಕೊಂಡಿರುವ ಕಳಂಕಗಳು ನಾಶಗೊಳ್ಳಲಿ. ದ್ವೇಷಪೂರಿತ ಮನೋಭಾವನೆಗಳು ದೇಶದಿಂದ ತೊಲಗಲಿ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ನೀವು ಪೋಪ್ ಆಗಲು ನಾನು ಕಾರಣ, ರಾಜಕಾರಣ ಬಿಟ್ಟು ಧರ್ಮಗುರುವಿನ ಕೆಲಸ ಮಾಡಿ: ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

SCROLL FOR NEXT