ತಿರುಪತಿ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವಂತೆ ಕರ್ನಾಟಕದಲ್ಲಿರುವ ತೆಲುಗರಿಗೆ ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಕರೆ ನೀಡಿದ್ದಾರೆ.
ತಿರುಪತಿಯಲ್ಲಿ ಮಾತನಾಡಿದ ಅವರು ಚಂದ್ರಬಾಬು ನಾಯ್ಡು ಅವರು ಕರ್ನಾಟಕದಲ್ಲಿ ನೆಲೆಸಿರುವ ತೆಲುಗು ಪ್ರಜೆಗಳೆ ನೀವು ಈ ಬಾರಿ ಬಿಜೆಪಿಗೆ ಮತ ನೀಡಬೇಡಿ ಎಂದು ಹೇಳಿದ್ದಾರೆ.
ಆಂಧ್ರಗೆ ವಿಶೇಷ ಸ್ಥಾನಮಾನ ನೀಡಲಿಲ್ಲ ಎಂಬ ಕಾರಣಕ್ಕೆ ಚಂದ್ರಬಾಬು ನಾಯ್ಡು ಅವರು ಎನ್ಡಿಎ ಮೈತ್ರಿಕೂಟದಿಂದ ಹೊರಬಂದಿದ್ದರು. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿನ ತೆಲುಗು ಪ್ರಜೆಗಳಿಗೆ ಬಿಜೆಪಿಗೆ ಮತ ನೀಡಬೇಡಿ ಎಂದು ಹೇಳಿದ್ದಾರೆ.
ನಾವು ಯಾವುದೇ ಅನುಕೂಲಕ್ಕಾಗಿ ಕೇಳುತ್ತಿಲ್ಲ. ರಾಜ್ಯದ ನ್ಯಾಯಕ್ಕಾಗಿ ಒತ್ತಾಯಿಸುತ್ತಿದ್ದೇವೆ. ಆದರೆ ಕೇಂದ್ರ ಸರ್ಕಾರ ವಿಶೇಷ ಸ್ಥಾನಮಾನ ನೀಡದೆ ಆಂಧ್ರಗೆ ಅನ್ಯಾಯ ಮಾಡಿದೆ ಎಂದು ನಾಯ್ಡು ಆರೋಪಿಸಿದ್ದಾರೆ.
ಇನ್ನು 2019ರ ಲೋಕಸಭಾ ಚುನಾವಣೆಯಲ್ಲಿ ಆಂಧ್ರದಲ್ಲಿನ 25 ಲೋಕಸಭಾ ಕ್ಷೇತ್ರಗಳಲ್ಲಿ ತೆಲುಗು ದೇಶಂ ಪಾರ್ಟಿ(ಟಿಡಿಪಿ) ಭರ್ಜರಿ ಜಯಗಳಿಸಲಿದ್ದು ಪ್ರಧಾನಮಂತ್ರಿ ಆಯ್ಕೆಯಲ್ಲಿ ಪ್ರಮುಖ ಪಾತ್ರ ವಹಿಸಬಹುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics