ಮಮತಾ ಬ್ಯಾನರ್ಜಿ 
ದೇಶ

ಎನ್ ಆರ್ ಸಿ ವಿರೋಧಿಸುತ್ತಿರುವ ಮಮತಾ ಬ್ಯಾನರ್ಜಿ ದೇಶದ್ರೋಹಿ, ಅರಾಜಕತಾವಾದಿ: ಬಿಜೆಪಿ

ರಾಷ್ಟ್ರೀಯ ಜನಸಂಖ್ಯಾ ರಿಜಿಸ್ಟರ್‌ ನಾಗರಿಕ ಯುದ್ಧಕ್ಕೆ ಕಾರಣವಾಗಲಿದೆ ಎಂಬ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿಕೆಗೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಮಮತಾ ಬ್ಯಾನರ್ಜಿ ದೇಶದ್ರೋಹಿ, ಅರಾಜಕತಾವಾದಿ ಎಂದು ಟೀಕಿಸಿದೆ.

ನವದೆಹಲಿ: ರಾಷ್ಟ್ರೀಯ ಜನಸಂಖ್ಯಾ ರಿಜಿಸ್ಟರ್‌  ನಾಗರಿಕ ಯುದ್ಧಕ್ಕೆ ಕಾರಣವಾಗಲಿದೆ ಎಂಬ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿಕೆಗೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಮಮತಾ ಬ್ಯಾನರ್ಜಿ ದೇಶದ್ರೋಹಿ, ಅರಾಜಕತಾವಾದಿ ಎಂದು ಟೀಕಿಸಿದೆ. 
ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿಯ ಜಗದಾಂಬಿಕ ಪಾಲ್, ಎನ್ ಆರ್ ಸಿಗೆ ವಿರೋಧ ವ್ಯಕ್ತಪಡಿಸುವುದೂ ದೇಶದ್ರೋಹಿಯಾಗಿರುವುದಕ್ಕೆ ಸಮನಾದದ್ದು ಎಂದು ಹೇಳಿದ್ದಾರೆ.  ಮಮತಾ ಬ್ಯಾನರ್ಜಿ ರೀತಿಯಲ್ಲಿ ಸಾಮಾನ್ಯರು ಯಾರಾದರೂ ಹೇಳಿಕೆ ನೀಡಿದ್ದರೆ ಅವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕಾಗುತ್ತಿತ್ತು, ಆದರೆ ಅದೇ ಕಾನೂನು ಮಮತಾ ಬ್ಯಾನರ್ಜಿ ಅವರಿಗೇಕೆ ಅನ್ವಯವಾಗುವುದಿಲ್ಲ ಎಂದು ಪಾಲ್ ಪ್ರಶ್ನಿಸಿದ್ದಾರೆ. 
ಬಾಂಗ್ಲಾದೇಶದಿಂದ ಅಕ್ರಮವಾಗಿ ಭಾರತ ಪ್ರವೇಶಿಸಿದವರನ್ನು ಹೊರಗೆ ಕಳಿಸಿದರೆ ದೇಶದಲ್ಲಿ ನಾಗರಿಕ ಯದ್ಧ ಯಾಕಾಗಬೇಕು? ಅಕ್ರಮವಾಗಿ ದೇಶದಲ್ಲಿ ನೆಲೆಸಿರುವವರನ್ನು ದೇಶ ಬಿಡುವಂತೆ ಸೂಚನೆ ನೀಡಿದರೆ ರಕ್ತಪಾತವಾಗುತ್ತದೆ ಎನ್ನುವವರ ವಿರುದ್ಧ ದೇಶದ್ರೋಹದ ಕಾಯ್ದೆಯನ್ನು ಜಾರಿಗೊಳಿಸಬೇಕೆಂದು ಬಿಜೆಪಿ ಹೇಳಿದೆ. ಇದೇ ವೇಳೆ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಸಹ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿದ್ದು ಮಮತಾ ಬ್ಯಾನರ್ಜಿಯವರನ್ನು ಅರಜಕತಾವಾದಿ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!