ಚಲಿಸುತ್ತಿದ್ದ ರೈಲಿನಲ್ಲಿ ಅಪಾಯಕಾರಿ ಸಾಹಸ ಮಾಡುತ್ತಾ ಮೊಬೈಲ್ ಕದ್ದ ಕದೀಮರು!
ಮುಂಬೈನ ಲೋಕಲ್ ರೈಲಿನಲ್ಲಿ ಅಪಾಯಕಾರಿ ಸಾಹಸ ಪ್ರದರ್ಶಿಸಿದ ಯುವಕರ ಗುಂಪೊಂದು ಇದೇ ವೇಳೆ ಪ್ಲಾಟ್ ಫಾರ್ಮ್ ಮೇಲೆ ನಿಂತಿದ್ದ ಪ್ರಯಾಣಿಕನ ಮೊಬೈಲ್ ಕಸಿದಿದ್ದಾರೆ...
ಮುಂಬೈ: ಮುಂಬೈನ ಲೋಕಲ್ ರೈಲಿನಲ್ಲಿ ಅಪಾಯಕಾರಿ ಸಾಹಸ ಪ್ರದರ್ಶಿಸಿದ ಯುವಕರ ಗುಂಪೊಂದು ಇದೇ ವೇಳೆ ಪ್ಲಾಟ್ ಫಾರ್ಮ್ ಮೇಲೆ ನಿಂತಿದ್ದ ಪ್ರಯಾಣಿಕನ ಮೊಬೈಲ್ ಕಸಿದಿದ್ದಾರೆ.
ಯುವಕರ ಗುಂಪಿನಲ್ಲಿ ಓರ್ವ ತಮ್ಮ ಅಪಾಯಕಾರಿ ಸ್ಟಂಟ್ ಅನ್ನು ಮೊಬೈಲ್ ನಲ್ಲಿ ಚಿತ್ರೀಕರಿಸುತ್ತಿದ್ದು ಇದೇ ವೇಳೆ ಮತ್ತೊಬ್ಬ ಯುವಕ ಮೊಬೈಲ್ ಕಸಿದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
ನಂತರ ಯುವಕರು ತಾವು ಚಿತ್ರಿಸಿದ್ದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ. ಈ ವಿಡಿಯೋವನ್ನು ಕಂಡ ಪೊಲೀಸರು ಮತ್ತು ರೈಲ್ವೆ ಭದ್ರತಾ ಪಡೆ(ಆರ್ಪಿಎಫ್) ಯುವಕರ ಗುಂಪನ್ನು ಬಂಧಿಸಿದೆ.
ಇದಕ್ಕೂ ಮುನ್ನ ಬೆಂಗಳೂರು ರೈಲಿನಲ್ಲಿ ಯುವಕನೊರ್ವ ರೈಲಿನ ಕಿಟಕಿಯನ್ನು ಹಿಡಿದುಕೊಂಡಿದ್ದ ವಿಡಿಯೋ ವೈರಲ್ ಆಗಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.