ಸಾಂದರ್ಭಿಕ ಚಿತ್ರ 
ದೇಶ

ಫೇಸ್ ಬುಕ್ ನಲ್ಲಿ 200 ಮಹಿಳೆಯರಿಗೆ ನಗ್ನಚಿತ್ರ ಕಳುಹಿಸುತ್ತಿದ್ದ ವ್ಯಕ್ತಿ ಬಂಧನ

: ಫೇಸ್ ಬುಕ್ ನಲ್ಲಿ ನಕಲಿ ಖಾತೆ ತೆರೆದು ಅದರ ಮೂಲಕ 200 ಮಹಿಳೆಯರಿಗೆ ಬೆತ್ತಲೆ ಫೋಟೋಗಳನ್ನು ಕಳುಹಿಸುತ್ತಿದ್ದ ವ್ಯಕ್ತಿಯನ್ನು ಹರ್ಯಾಣ ಪೋಲೀಸರು ...

ನವದೆಹಲಿ: ಫೇಸ್ ಬುಕ್ ನಲ್ಲಿ ನಕಲಿ ಖಾತೆ ತೆರೆದು ಅದರ ಮೂಲಕ 200 ಮಹಿಳೆಯರಿಗೆ ಬೆತ್ತಲೆ ಫೋಟೋಗಳನ್ನು ಕಳುಹಿಸುತ್ತಿದ್ದ ವ್ಯಕ್ತಿಯನ್ನು ಹರ್ಯಾಣ ಪೋಲೀಸರು ಬಂಧಿಸಿದ್ದಾರೆ.
ಗುರುಗಾವ್ ಜಿಲ್ಲೆಯ ವಿಜಯ್ ಎಂಬಾತನನ್ನು ಮಂಗಳವಾರ ಆತನ ಮನೆಯಲ್ಲಿ ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. 
ಯುವತಿಯ ಹೆಸರಲ್ಲಿ ಖಾತೆ ತೆರೆದು ಫ್ರೆಂಡ್ ರಿಕ್ವೆಸ್ಟ್ ಕಳುಹಿಸುತ್ತಿದ್ದಾಗಿ ವಿಚಾರಣೆ ವೇಳೆ ಆತನೇ ಬಾಯಿಬಿಟ್ಟಿದ್ದಾನೆ. ಹಲವು ಮಹಿಳೆಯರ ಫೋಟೋಗಳನ್ನು ಅವರ ಅರಿವಿಗೆ ಬಾರದಂತೆ ಪ್ರೊಫೈಲ್ ನಿಂದ ಕದಿಯುತ್ತಿದ್ದ. ಅನಂತರ ಅವರನ್ನು ಅನ್ ಫ್ರೆಂಡ್ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ,
ಐಜಿಐಎ ನಲ್ಲಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದ.ವಿಜಯ್ ಮಹಿಳೆ ಮತ್ತು ಪುರುಷರ ಹೆಸರಲ್ಲಿ ನಕಲಿ ಖಾತೆ ತೆರೆಯುತ್ತಿದ್ದ. ಹಲವು ಮಹಿಳೆಯರು ಈತ ಯುವತಿ ಎಂದು ತಿಳಿದು ಫ್ರೆಂಡ್ ರಿಕ್ವೆಸ್ಟ್ ಅಕ್ಸೆಪ್ಟ್ ಮಾಡುತ್ತಿದ್ದರು. ನಂತರ ಅವರಿಗೆ ಅಶ್ಲೀಲ ಫೋಟೋಗಳನ್ನು ಕಳುಹಿಸುತ್ತಿದ್ದನು, ಒಂದು ವೇಳೆ ಮಹಿಳೆಯರು ಅದಕ್ಕೆ ವಿರೋಧ ವ್ಯ ಕ್ತ ಪಡಿಸಿದರೇ, ಅವರ ಪ್ರೊಫೈಲ್ ನಿಂದ್ ಫೊಟೋ ತೆಗೆದು ಅವರ ಫೋಟೋಗಳನ್ನೆ ತಿರುಚಿ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಎಂದು ಪೋಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್