ಸಂಗ್ರಹ ಚಿತ್ರ 
ದೇಶ

ಶೋಪಿಯಾನ್ ಎನ್ ಕೌಂಟರ್; 5 ಉಗ್ರರ ಹತ್ಯೆ, ಕಾರ್ಯಾಚರಣೆ ಮುಂದುವರಿಕೆ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಉಪಟಳ ಮುಂದುವರೆದಿದ್ದು, ಸೋಪೋರ್, ಕುಪ್ವಾರ ದಾಳಿ ಬೆನ್ನಲ್ಲೇ ಮತ್ತೆ ಉಗ್ರರು ಶೋಪಿಯಾನ್ ನಲ್ಲಿ ದಾಳಿ ನಡೆಸಿದ್ದಾರೆ. ಈ ವೇಳೆ ಸೈನಿಕರು ನಡೆಸಿದ ಪ್ರತಿದಾಳಿಯಲ್ಲಿ 5 ಮಂದಿ ಉಗ್ರರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ.

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಉಪಟಳ ಮುಂದುವರೆದಿದ್ದು, ಸೋಪೋರ್, ಕುಪ್ವಾರ ದಾಳಿ ಬೆನ್ನಲ್ಲೇ ಮತ್ತೆ ಉಗ್ರರು ಶೋಪಿಯಾನ್ ನಲ್ಲಿ ದಾಳಿ ನಡೆಸಿದ್ದಾರೆ. ಈ ವೇಳೆ ಸೈನಿಕರು ನಡೆಸಿದ ಪ್ರತಿದಾಳಿಯಲ್ಲಿ 5 ಮಂದಿ ಉಗ್ರರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ.
ರಾಜಧಾನಿ ಶ್ರೀನಗರದಿಂದ ಸುಮಾರು 55 ಕಿ.ಮೀ ದೂರದಲ್ಲಿರುವ ಶೋಪಿಯಾನ್ ನಲ್ಲಿ ಉಗ್ರರು ಮತ್ತು ಸೇನಾಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ಸೇನಾಪಡೆಗಳ ದಾಳಿಗೆ ಐದು ಮಂದಿ ಉಗ್ರರು ಸಾವನ್ನಪ್ಪಿದ್ದಾರೆ.
ಸೇನಾ ಮೂಲಗಳ ಪ್ರಕಾರ ಶೋಪಿಯಾನ್ ನಲ್ಲಿ ಉಗ್ರರ ಇರುವಿಕೆ ಕುರಿತು ಮಾಹಿತಿ ಪಡೆದ ಸೇನಾಧಿಕಾರಿಗಳ ತಡ ರಾತ್ರಿಯಲ್ಲೇ ಪ್ರದೇಶವನ್ನು ಸುತ್ತುವರೆದಿದ್ದಾರೆ. ಅತ್ತ ಸೇನೆ ಆಗಮಿಸುತ್ತಿದ್ದಂತೆಯೇ ಎಚ್ಚೆತ್ತ ಉಗ್ರರು ಗುಂಡಿನ ಸುರಿಮಳೆ ಆರಂಭಿಸಿದ್ದಾರೆ. ಈ ವೇಳೆ ಸೇನೆ ನಡೆಸಿದ ಪ್ರತಿದಾಳಿಯಲ್ಲಿ ಕನಿಷ್ಠ ಐದು ಮಂದಿ ಉಗ್ರರು ಸಾವನ್ನಪ್ಪಿದ್ದು, ಈ ಪೈಕಿ ಓರ್ವ ಉಗ್ರನ ಶವವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಅಲ್ಲದೆ ಮತದೇಹದ ಬಳಿ ಬಿದ್ದಿದ್ದ ಎಕೆ 47 ರೈಫಲ್ ಮತ್ತು ಹಲವು ಮ್ಯಾಗಜಿನ್ ಗಳನ್ನೂ ಕೂಡ ವಶಪಡಿಸಿಕೊಂಡಿದ್ದಾರೆ.
ಮೃತ ಉಗ್ರನನ್ನು ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆಗೆ ಸೇರಿದ ಉಗ್ರ ಉಮರ್ ಮಲಿಕ್ ಎಂದು ಗುರುತಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!