ರಾಜ್ ಸಮಾಂದ್ : ದೇಶವನ್ನು ಅಭಿವೃದ್ದಿಗೊಳಿಸುವಲ್ಲಿ ಕಾಂಗ್ರೆಸ್ ವಿಫಲವಾಗಿದ್ದು, ಆ ಪಕ್ಷ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಮಾಡಿರುವ ಅಭಿವೃದ್ದಿ ಕಾರ್ಯಗಳಿಗೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರ ನೀಡುತ್ತಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ , ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಅಸ್ಸಾಂನಲ್ಲಿನ ಎನ್ ಆರ್ ಸಿ ಸಂಬಂಧ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸಿದ ಅಮಿತ್ ಶಾ, ಬಾಂಗ್ಲಾದೇಶಿ ವಲಸಿಗರು ದೇಶದಲ್ಲಿ ನೆಲೆಸದಂತೆ ತಡೆಯಲು ಸರ್ಕಾರಕ್ಕೆ ಇದು ನೆರವಾಗಲಿದೆ ಎಂದರು.
ಬಿಜೆಪಿ 2014ರಲ್ಲಿ ಅಧಿಕಾರಕ್ಕೆ ಬಂದ ನಂತರ ಬಡವರಿಗಾಗಿ ರಾಜಸ್ತಾನದಲ್ಲಿ ಹಲವು ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಸಾರ್ವಜನಿಕರಿಗಾಗಿ ನಾವು ಎಷ್ಟು ಕೊಟ್ಟಿದ್ದೇವೆ ಎಂಬುದನ್ನು ಹೇಳಲು ನನ್ನಗೆ ಇಟಲಿಯನ್ ಭಾಷೆ ಬರುವುದಿಲ್ಲ, ರಾಜಸ್ತಾನಕ್ಕಾಗಿ ಮೋದಿ ಸರ್ಕಾರ 116 ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಹೇಳಿದರು.
ಸೆಪ್ಟೆಂಬರ್ ತಿಂಗಳಿನಿಂದ ಆಯುಷ್ಮನ್ ಭಾರತ್ ಆರೋಗ್ಯ ಯೋಜನೆ ಜಾರಿಗೊಳಿಸಲಾಗುತ್ತಿದೆ. ಇದರಿಂದ ರಾಜಸ್ತಾನದಲ್ಲಿನ 50 ಕೋಟಿ ಜನರಿಗೆ ಅನುಕೂಲವಾಗಲಿದೆ ಎಂದು ಅಮಿತ್ ಶಾ ಹೇಳಿದರು.