ಅಮಿತ್ ಶಾ 
ದೇಶ

ಎನ್ ಆರ್ ಸಿ ಕರಡು ಬಗ್ಗೆ ರಾಹುಲ್ ಸ್ಪಷ್ಟ ನಿಲುವು ವ್ಯಕ್ತಪಡಿಸಿಲ್ಲ - ಅಮಿತ್ ಶಾ

ಅಸ್ಸಾಂ ರಾಷ್ಟ್ರೀಯ ಪೌರತ್ವ ನೋಂದಣಿ- ಎನ್ ಆರ್ ಸಿ ಕರಡು ಬಗ್ಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸ್ಪಷ್ಟವಾಗಿ ತಮ್ಮ ನಿಲುವು ವ್ಯಕ್ತಪಡಿಸಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ಮುಘಲ್ ಸಾರೈ :  ಅಸ್ಸಾಂ ರಾಷ್ಟ್ರೀಯ ಪೌರತ್ವ ನೋಂದಣಿ- ಎನ್ ಆರ್ ಸಿ ಕರಡು ಬಗ್ಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ  ಸ್ಪಷ್ಟವಾಗಿ ತಮ್ಮ ನಿಲುವು   ವ್ಯಕ್ತಪಡಿಸಿಲ್ಲ ಎಂದು  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ಉತ್ತರ ಪ್ರದೇಶದ ಮುಘಲ್ ಸಾರೈನಲ್ಲಿಂದು ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸುಪ್ರೀಂಕೋರ್ಟ್ ಆದೇಶದಂತೆ  ಕೇಂದ್ರಸರ್ಕಾರ ಎನ್ ಆರ್ ಸಿ ಕರಡು ಸಿದ್ಧಪಡಿಸಿದೆ. ಆದರೆ.ಪ್ರತಿಪಕ್ಷಗಳು ಇಂದು ದೇಶವನ್ನು ವಿಭಜಿಸುವ ಪ್ರಯತ್ನ ನಡೆಸುತ್ತಿವೆ ಅಸ್ಸಾಂನಿಂದ ಅಕ್ರಮವಾಗಿ ವಲಸೆ ಬಂದಿರುವ ಬಾಂಗ್ಲಾದೇಶಿಯರನ್ನು ಓಡಿಸಬೇಕೆಂಬುದು ಎನ್ ಆರ್ ಸಿಯ ಉದ್ದೇಶವಾಗಿದೆ ಎಂದರು.

 ಆದಾಗ್ಯೂ, ಎನ್ ಆರ್ ಸಿಯನ್ನು ಅನುಷ್ಠಾನಗೊಳಿಸದಂತೆ  ಮಮತಾ ಬ್ಯಾನರ್ಜಿ ಹೇಳುತ್ತಾರೆ. ಕಾಂಗ್ರೆಸ್ ಕೂಡಾ ಅದೇ ನಂಬಿಕೆ ಹೊಂದಿದೆ. ಎನ್ ಆರ್ ಸಿ  ಈ ದೇಶದಲ್ಲಿರಬೇಕಾ ಅಥವಾ ಬೇಡ ಎಂಬ ಬಗ್ಗೆ ರಾಹುಲ್ ಗಾಂಧಿ ಏನನ್ನೂ ಪ್ರತಿಕ್ರಿಯಿಸುತ್ತಿಲ್ಲ  ಎಂದು ಅಮಿತ್ ಶಾ ಹೇಳಿದರು.

ಬಾಂಗ್ಲಾದೇಶಿಯರನ್ನು ದೇಶದೊಳಗೆ ಇಟ್ಟುಕೊಳ್ಳತ್ತೀರಾ ಅಥವಾ ಅವರನ್ನು ಹೊರಗೆ ಕಳುಹಿಸುತ್ತೀರಾ ಎಂದು ನಿರ್ಧರಿಸಿ ಎಂದು ಎಸ್ಪಿ, ಬಿಎಸ್ ಪಿ, ಕಾಂಗ್ರೆಸ್  ಪಕ್ಷವನ್ನು ಕೇಳಲು ಬಯಸುತ್ತೇನೆ ಎಂದು ಪ್ರತಿಪಕ್ಷಗಳ ವಿರುದ್ಧ ಅಮಿತ್ ಶಾ ವಾಗ್ದಾಳಿ ನಡೆಸಿದರು.

 ಹಿಂದುಳಿದ ವರ್ಗಗಳ ಆಯೋಗಕ್ಕೆ ಸಂವಿಧಾನಿಕ ಸ್ಥಾನಮಾನ ಕಲ್ಪಿಸುವ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕಾರವಾಗಿತ್ತು. ನಂತರ ರಾಜ್ಯಸಭೆಗೆ ಹೋದರೆ ಅಲ್ಲಿಕಾಂಗ್ರೆಸ್ ಪಕ್ಷ ಬೆಂಬಲ ನೀಡಿತ್ತಾ ಅಥವಾ ಇಲ್ಲವಾ ಎಂಬುದನ್ನು ರಾಹುಲ್ ಗಾಂಧಿ ಅವರನ್ನು ಕೇಳುತ್ತೇನೆ. ಯೋಗಿ ಆದಿತ್ಯನಾಥ್ ನಾಯಕತ್ವದಲ್ಲಿ ಉತ್ತರ ಪ್ರದೇಶದಲ್ಲಿ ಮಾಫಿಯಾ ನಿಂತಿದ್ದು, ಉತ್ತಮ ಪ್ರಗತಿ ಕಾಣುತ್ತಿದೆ ಎಂದು ಅಮಿತ್ ಶಾ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

IPL 2026: MI vs RCB; ವಾಂಖೆಡೆ ಕ್ರೀಡಾಂಗಣದಲ್ಲಿ ಇತಿಹಾಸ ಬರೆದ ಬೆಂಗಳೂರು, ಅತ್ಯಧಿಕ ಮೊತ್ತ!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

SCROLL FOR NEXT