ಸಾಂದರ್ಭಿಕ ಚಿತ್ರ 
ದೇಶ

ರಾಜಸ್ಥಾನ: ಅಪ್ರಾಪ್ತ ಬಾಲಕಿ ಅಪಹರಿಸಿ, ಚಲಿಸುವ ಕಾರಿನಲ್ಲೇ ಅತ್ಯಾಚಾರ

ಇಬ್ಬರು ಯುವಕರು ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಚಲಿಸುವ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ...

ಬಿಕಾನೆರ್: ಇಬ್ಬರು ಯುವಕರು ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಚಲಿಸುವ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಆರೋಪಿಗಳು ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಲ್ಲದೆ, ಆಕೆಯ ಆಕ್ಷೇಪಾರ್ಹ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ನಿನ್ನೆ ಬಾಲಕಿ ಕುಟುಂಬಸ್ಥರು ನೀಡಿದ ದೂರಿನ ಆಧಾರದ ಮೇಲೆ ಆರೋಪಿಗಳಾದ ಬಲರಾಮ್ ಜಾಟ್ ಮತ್ತು ಅದುರಾಮ್ ಜಾಟ್ ರನ್ನು ಬಂಧಿಸಲಾಗಿದೆ ಮತ್ತು ಅವರ ವಿರುದ್ಧ ಪೋಸ್ಕೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಛತ್ತರ್ ಗಢ ಪೊಲೀಸ್ ಠಾಣೆಯ ಅಧಿಕಾರಿ ವಿಕಾಸ್ ಬಿಶ್ನೋಯಿ ಅವರು ತಿಳಿಸಿದ್ದಾರೆ.
ಎಫ್ಐಆರ್ ಪ್ರಕಾರ, ಕಳೆದ ಜುಲೈ 29ರಂದು ಆರೋಪಿಗಳು ಬಾಲಕಿಯನ್ನು ಪುಸುಲಾಯಿಸಿ ತಮ್ಮ ಜೀಪ್ ಗೆ ಹತ್ತಿಸಿಕೊಂಡಿದ್ದಾರೆ. ಬಳಿಕ ಚಲಿಸುವ ಜೀಪ್ ನಲ್ಲೇ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಆಕೆಯನ್ನು ರಸ್ತೆಬದಿ ಬಿಟ್ಟು ಹೋಗಿದ್ದಾರೆ.
ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್