ನವದೆಹಲಿ: ಹಿರಿಯ ಕಾಂಗ್ರೆಸ್ ಮುಖಂಡ ಆರ್. ಕೆ. ಧವನ್ ನಿಧನರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು.
ಧವನ್ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಆಪ್ತರಾಗಿದ್ದರು . ಅಲ್ಲದೇ ಅವರ ಆಪ್ತ ಸಹಾಯಕರಾಗಿ ಕಾರ್ಯನಿರ್ವಹಿಸಿದ್ದರು. ಇಂದಿರಾಗಾಂಧಿ ಹತ್ಯೆಯ ಪ್ರತ್ಯೇಕ್ಷದರ್ಶಿ ಕೂಡಾ ಆಗಿದ್ದರು.
ಇಂದಿರಾಗಾಂಧಿ ಅವರ ಪ್ರಭಾವದಿಂದಾಗಿ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಆರ್ . ಕೆ. ಧವನ್ ಬಲಾಡ್ಯ ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದರು. ಅವರು ರಾಜ್ಯಸಭೆಯ ಸದಸ್ಯರಾಗಿದ್ದರು.