ಸಂಗ್ರಹ ಚಿತ್ರ 
ದೇಶ

ಬಿಹಾರ: ರೈಲ್ವೇ ನಿಲ್ದಾಣದ ಶೌಚಾಲಯ ಗೋಡೆ ಕುಸಿದ, ವ್ಯಕ್ತಿ ಸಾವು

ಪಾಟ್ನ ರೈಲ್ವೇ ನಿಲ್ದಾಣದಲ್ಲಿದ್ದ ಶೌಚಾಲಯದ ಗೋಡೆ ಕುಸಿದು ಬಿದ್ದ ಪರಿಣಾಮ 70 ವರ್ಷದ ವೃದ್ಧನೊಬ್ಬ ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ...

ಪಾಟ್ನ: ಪಾಟ್ನ ರೈಲ್ವೇ ನಿಲ್ದಾಣದಲ್ಲಿದ್ದ ಶೌಚಾಲಯದ ಗೋಡೆ ಕುಸಿದು ಬಿದ್ದ ಪರಿಣಾಮ 70 ವರ್ಷದ ವೃದ್ಧನೊಬ್ಬ ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ. 
ವೈಶಾಲಿ ಜಿಲ್ಲೆಯ ವಿಷ್ಣುಪರದ ಪ್ರದೇಶದ ನಿವಾಸಿ ವೀರ್ ಬಹದ್ದೂರ್ ಸಿಂಗ್ (70) ಮೃತಪಟ್ಟ ವ್ಯಕ್ತಿಯೆಂದು ಹೇಳಲಾಗುತ್ತಿದೆ. 
ವೀರ್ ಬಹದ್ದೂರ್ ಅವರು ಪಾಟ್ನಾದಿಂದ ಕೋಲ್ಕತಾಗೆ ಪ್ರಯಾಣ ಬೆಳೆಸುವ ಸಲುವಾಗಿ ರೈಲ್ವೇ ನಿಲ್ದಾಣಕ್ಕೆ ಬಂದಿದ್ದರು. ನಿಲ್ದಾಣದ ಬಳಿಯಿದ್ದ ಶೌಚಾಲಯಕ್ಕೆ ತೆರಳಿದ್ದ ಸಂದರ್ಭದಲ್ಲಿ ಗೋಡೆ ಇದ್ದಕ್ಕಿದ್ದಂತೆಯ ಕುಸಿದು ಬಿದ್ದಿದೆ. ಪರಿಣಾಮ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. 
ಪ್ರಕರಣ ದಾಖಲಿಸಿಕೊಂಡಿರುವ ರೈಲ್ವೇ ಅಧಿಕಾರಿಗಳು, ತನಿಖೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಂಪುಟ ವಿಸ್ತರಣೆಯಲ್ಲಿ ಬಿಗ್ ಟ್ವಿಸ್ಟ್: ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 19 ಶಾಸಕರು; ಕೊನೆ ಕ್ಷಣದಲ್ಲಿ ಒಬ್ಬರಿಗೆ ಕೊಕ್!

ಕಾಂಗ್ರೆಸ್‌ ಲೆಟರ್‌ಹೆಡ್‌ನಲ್ಲಿ ಸ್ಪೀಕರ್‌ ಹೆಸರು; ಮತ್ತೊಂದು ಕೆಟ್ಟ ಸಂಪ್ರದಾಯಕ್ಕೆ ನಾಂದಿ: ಸುರೇಶ್‌ ಕುಮಾರ್‌ ಕಿಡಿ

Bigg Boss ಖ್ಯಾತಿಯ Aravind KP- Divya uruduga ಬ್ರೇಕಪ್​!; ಜಾಲತಾಣದಲ್ಲಿ ಪರಸ್ಪರ Unfollow; ನಿಜವಾಯ್ತಾ ಜೋತಿಷ್ಯ?

ಆಂತರಿಕ ಅಸಮಾಧಾನ: ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ CM ಸಿಎಂ ಸಿದ್ದರಾಮಯ್ಯ ಗೈರಾಗಿದ್ದೇಕೆ?

ನೂತನ ಸಚಿವರ ಪಟ್ಟಿ ಪ್ರಕಟ ಬೆನ್ನಲ್ಲೇ ಭುಗಿಲೆದ್ದ ಆಕ್ರೋಶ; ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ!