ಜಮ್ಮು ಮತ್ತು ಕಾಶ್ಮೀರ: ಎನ್ಕೌಂಟರ್ನಲ್ಲಿ 4 ಉಗ್ರರ ಹತ್ಯೆ, ಮೇಜರ್ ಸೇರಿ 4 ಯೋಧರು ಹುತಾತ್ಮ
ಜಮ್ಮು ಮತ್ತು ಕಾಶ್ಮೀರದ ಗುರೇಜ್ ಸೆಕ್ಟರ್ ಬಳಿ ಗಡಿ ನುಸುಳುತ್ತಿದ್ದ ಉಗ್ರರ ಮೇಲೆ ಭಾರತೀಯ ಸೇನೆ ಗುಂಡಿನ ದಾಳಿ ನಡೆಸಿದ್ದು ಇದರಲ್ಲಿ...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗುರೇಜ್ ಸೆಕ್ಟರ್ ಬಳಿ ಗಡಿ ನುಸುಳುತ್ತಿದ್ದ ಉಗ್ರರ ಮೇಲೆ ಭಾರತೀಯ ಸೇನೆ ಗುಂಡಿನ ದಾಳಿ ನಡೆಸಿದ್ದು ಇದರಲ್ಲಿ ನಾಲ್ವರು ಉಗ್ರರನ್ನು ಹೊಡೆದುರುಳಿಸಿದ್ದು ಇನ್ನು ಗುಂಡಿನ ದಾಳಿಯಲ್ಲಿ ಮೇಜರ್ ಸೇರಿದಂತೆ ನಾಲ್ವರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ.
ಕಳೆದ ರಾತ್ರಿ ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ಬಂಡಿಪೋರ ಜಿಲ್ಲೆಯ ಗುರೇಜ್ ಸೆಕ್ಟರ್ ಬಳಿ 8 ಉಗ್ರರ ತಂಡ ಗಡಿ ನುಸುಳುತ್ತಿದ್ದ ವೇಳೆ 36ನೇ ರಾಷ್ಟ್ರೀಯ ರೈಫಲ್ ಬೆಟಾಲಿಯನ್ ಯೋಧರು ಗುಂಡಿನ ದಾಳಿ ನಡೆಸಿದ್ದಾರೆ. ಇದರಲ್ಲಿ ನಾಲ್ವರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ. ಇನ್ನು ಗುಂಡಿನ ದಾಳಿಯಲ್ಲಿ ಭಾರತೀಯ ಸೇನೆಯ ಮೇಜರ್ ಸೇರಿದಂತೆ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.
ಸದ್ಯ ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರೆದಿದ್ದು ಅಡಗಿ ಕುಳಿತಿರುವ ಉಗ್ರರ ದಮನಕ್ಕೆ ಭಾರತೀಯ ಸೇನೆ ಮುಂದಾಗಿದೆ. ಸದ್ಯ ಇಬ್ಬರ ಉಗ್ರರ ಮೃತದೇಹವನ್ನು ಸೇನೆ ವಶಪಡಿಸಿಕೊಂಡಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.