ಕರುಣಾನಿಧಿಗೆ ಕಣ್ಣೀರ ವಿದಾಯ 
ದೇಶ

ಮಣ್ಣಲ್ಲಿ ಮಣ್ಣಾದ ಮುತ್ತುವೇಲ್ ಕರುಣಾನಿಧಿ, ಕಲೈನಾರ್ ಗೆ ಕಣ್ಣೀರ ವಿದಾಯ

ಸೋಲರಿಯದ ಸರದಾರನೆಂದೆ ಖ್ಯಾತಿ ಪಡೆದಿದ್ದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಮುಖ್ಯಸ್ಥ ಮುತ್ತುವೇಲ್....

ಚೆನ್ನೈ: ಸೋಲರಿಯದ ಸರದಾರನೆಂದೆ ಖ್ಯಾತಿ ಪಡೆದಿದ್ದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಮುಖ್ಯಸ್ಥ ಮುತ್ತುವೇಲ್ ಕರುಣಾನಿಧಿ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ಬುಧವಾರ ಮರೀನಾ ಬೀಚ್ ನಲ್ಲಿ ನೆರವೇರಿಸಲಾಯಿತು. ಲಕ್ಷಾಂತರ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕನಿಗೆ ಕಣ್ಣೀರ ವಿದಾಯ ಹೇಳಿದರು.
ಇಂದು ಸಂಜೆ ಮರೀನಾ ಬೀಚ್ ನಲ್ಲಿರುವ ಡಿಎಂಕೆ ಸಂಸ್ಥಾಪಕ ಹಾಗೂ ಅವರ ರಾಜಕೀಯ ಗುರು ಅಣ್ಣಾ ದೊರೈ ಅವರ ಅಣ್ಣ ಸ್ಮಾರಕದ ಬಳಿ ದ್ರಾವಿಡ ಸಂಪ್ರದಾಯದಂತೆ ಕರುಣಾನಿಧಿ ಅವರ ಅಂತ್ಯ ಸಂಸ್ಕಾರ ನಡೆಯಿತು.
ಅಂತ್ಯಸಂಸ್ಕಾರದಲ್ಲಿ ಕರುಣಾನಿಧಿ ಪುತ್ರರಾದ ಎಂ.ಕೆ.ಸ್ಟಾಲಿನ್, ಅಳಗಿರಿ, ಕುಟುಂಬ ಸದಸ್ಯರು ಹಾಗೂ ಸಾವಿರಾರು ಗಣ್ಯರು ಮತ್ತು ಲಕ್ಷಾಂತರ ಅಭಿಮಾನಿಗಳು ಭಾಗವಹಿಸಿದ್ದರು.
ಇದಕ್ಕು ಮುನ್ನ ಚೆನ್ನೈನ ರಾಜಾಜಿ ಹಾಲ್ ನಿಂದ ಮರೀನಾ ಬೀಚ್ ವರೆಗೆ ಪಾರ್ಥಿವ ಶರೀರದ ಮೆರವಣಿಗೆ ನಡೆಸಲಾಯಿತು.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕರುಣಾನಿಧಿ ಅವರು ಮಂಗಳವಾರ ಸಂಜೆ ಕಾವೇರಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದರು. ಇಂದು ಬೆಳಗ್ಗೆಯಿಂದ ರಾಜಾಜಿ ಹಾಲ್ ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. 
ಇಂದು ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಕರ್ನಾಟಕದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಸೇರಿದಂತೆ ಹಲವಾರು ಗಣ್ಯರು ಅಸ್ತಂಗತರಾದ ಎಂ.ಕರುಣಾನಿಧಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Tsunami: ದಕ್ಷಿಣ ಫಿಲಿಪೈನ್ಸ್‌ನಲ್ಲಿ 7.6 ತೀವ್ರತೆಯ ಭೂಕಂಪ; ಅಪಾಯಕಾರಿ ಸುನಾಮಿಯ ಎಚ್ಚರಿಕೆ!

Bus strike-ಬೇಡಿಕೆಗೆ ಕ್ಯಾರೇ ಎನ್ನದ ಸರ್ಕಾರ: ಮತ್ತೆ ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರು

ಕುತೂಹಲ ಮೂಡಿಸಿದ ಸಿಎಂ ಸಿದ್ದರಾಮಯ್ಯ ಡಿನ್ನರ್ ಮೀಟ್: ಗರಿಗೆದರಿದ ಸಂಪುಟ ಪುನಾರಚನೆ, ಡಿಸಿಎಂ ಡಿಕೆಶಿ ಏನೆಂದರು?

ಸಚಿವ ಸಂಪುಟ ಪುನಾರಚನೆ ವಿಚಾರ ನನಗೆ ಗೊತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

Big shake-up: ಎರಡೂವರೆ ವರ್ಷಗಳ ಅವಧಿ ಮುಗಿಯುತ್ತಿದ್ದಂತೆ ಶೇ.50ರಷ್ಟು ಸಚಿವರನ್ನು ಸಿದ್ದು ಕೈಬಿಡುವ ಸಾಧ್ಯತೆ?

SCROLL FOR NEXT