ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಬುಧವಾರ ನಡೆದ ಎನ್ ಕೌಂಟರ್ ನಲ್ಲಿ ಭಾರತೀಯ ಸೇನೆ ನಾಲ್ವರು ಉಗ್ರರನ್ನು ಹೊಡೆದುರುಳಿಸಿದೆ.
ರಫಿಯಾಬಾದ್ ನ ಲಡೂರ ಅರಣ್ಯ ಪ್ರದೇಶದಲ್ಲಿ ನಡೆದ ಎನ್ ಕೌಂಟರ್ ವೇಳೆ ಓರ್ವ ಯೋಧ ಸಹ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೋಮವಾರದಿಂದ ನಡೆಯುತ್ತಿರುವ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಓರ್ವ ಯೋಧ ಗಾಯಗೊಂಡಿದ್ದಾರೆ ಮತ್ತು ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.