ಜಮ್ಮು ಕಾಶ್ಮೀರ: ಹುತಾತ್ಮ ಯೋಧರಿಗೆ ಭಾರತೀಯ ಸೇನೆ ಅಂತಿಮ ನಮನ
ಜಮ್ಮು ಮತ್ತು ಕಾಶ್ಮೀರದ ಗುರೇಜ್ ಸೆಕ್ಟರ್ ಬಳಿ ಗಡಿ ನುಸುಳುತ್ತಿದ್ದ ಉಗ್ರರ ಮೇಲೆ ಭಾರತೀಯ ಸೇನೆ ಗುಂಡಿನ ದಾಳಿ ನಡೆಸುವ ವೇಳೆ ಹುತಾತ್ಮರಾದ ...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗುರೇಜ್ ಸೆಕ್ಟರ್ ಬಳಿ ಗಡಿ ನುಸುಳುತ್ತಿದ್ದ ಉಗ್ರರ ಮೇಲೆ ಭಾರತೀಯ ಸೇನೆ ಗುಂಡಿನ ದಾಳಿ ನಡೆಸುವ ವೇಳೆ ಹುತಾತ್ಮರಾದ ಮೇಜರ್ ಸೇರಿದಂತೆ ನಾಲ್ವರು ಭಾರತೀಯ ಯೋಧರಿಗೆ ಸೇನಾ ಪಡೆ ಅಂತಿಮ ನಮನ ಸಲ್ಲಿಸಿದೆ.
ಆಗಸ್ಟ್ 7 ರಂದು ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ಬಂಡಿಪೋರ ಜಿಲ್ಲೆಯ ಗುರೇಜ್ ಸೆಕ್ಟರ್ ಬಳಿ 8 ಉಗ್ರರ ತಂಡ ಗಡಿ ನುಸುಳುತ್ತಿದ್ದ ವೇಳೆ 36ನೇ ರಾಷ್ಟ್ರೀಯ ರೈಫಲ್ ಬೆಟಾಲಿಯನ್ ಯೋಧರು ಗುಂಡಿನ ದಾಳಿ ನಡೆಸಿದ್ದರು. ಇದರಲ್ಲಿ ನಾಲ್ವರು ಉಗ್ರರನ್ನು ಹತ್ಯೆಗೈಯ್ಯಲಾಗಿತ್ತು. ಇನ್ನು ಗುಂಡಿನ ದಾಳಿಯಲ್ಲಿ ಭಾರತೀಯ ಸೇನೆಯ ಮೇಜರ್ ಸೇರಿದಂತೆ ನಾಲ್ವರು ಯೋಧರು ಹುತಾತ್ಮರಾಗಿದ್ದರು.
ಮೇಜರ್ ಕೌಸ್ತುಬ್ ರಾಣೆ, ಹಮೀರ್ ಸಿಂಗ್, ಮಂದೀಪ್ ಸಿಂಗ್ ರಾವತ್, ಮತ್ತು ವಿಕ್ರಮ್ ಜೀತ್ ಸಿಂಗ್ ಹುತಾತ್ಮರಾಗಿದ್ದರು, ಬುಲೆಟ್ ಗುಂಡುಗಳಿಂದ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ. ಹುತಾತ್ಮ ಯೋಧರಿಗೆ ಸೇನೆ ಸಂಪೂರ್ಣ ಗೌರವ ವಂದನೆ ಸಲ್ಲಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.